ಬ್ರೇಕಿಂಗ್ ನ್ಯೂಸ್
04-09-24 11:18 am Bangalore Correspondent ಕರ್ನಾಟಕ
ಬೆಂಗಳೂರು, ಸೆ.4: ಖರ್ಗೆ ಕುಟುಂಬಕ್ಕೆ ಭೂಮಿ ನೀಡಿರುವುದನ್ನು ಪ್ರಶ್ನೆ ಮಾಡಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧವೇ ಭೂ ಅಕ್ರಮ ಆರೋಪ ಕೇಳಿಬಂದಿದೆ. ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದು ನಾರಾಯಣ ಸ್ವಾಮಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹ ಮಾಡಿದ್ದಾರೆ.
ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್‌ನ ಹಲವು ಸದಸ್ಯರು, ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ 61 ಪುಟಗಳ ಸುದೀರ್ಘ ದೂರನ್ನು ಸಲ್ಲಿಸಿದರು. ಇದೇ ವೇಳೆ ಆರೋಪಕ್ಕೆ ಸಂಬಂಧಿಸಿದಂತೆ ಅಗತ್ಯ ಪುರಾವೆಗಳನ್ನು ಒದಗಿಸಿದ್ದಾರೆ.
2002 ರ ನವೆಂಬರ್ 28 ರಿಂದ 2004 ರ ಮೇ 5 ರ ನಡುವೆ ಕರ್ನಾಟಕ ವಸತಿ ಮಂಡಳಿ ನಿರ್ದೇಕರಾಗಿದ್ದ ಛಲವಾದಿ ನಾರಾಯಣ ಸ್ವಾಮಿಯವರು ಭೂಕಬಳಿಕೆ ಮಾಡಿ ತಾವು ಅಧ್ಯಕ್ಷರಾಗಿರುವ ಆದರ್ಶ ಸೋಶಿಯಲ್ ಆ್ಯಂಡ್ ಎಜುಕೇಷನ್ ಟ್ರಸ್ಟ್‌ಗೆ ಬಳಸಿಕೊಂಡಿದ್ದು, ಶಾಲೆ ನಿರ್ಮಿಸಿದ್ದಾರೆ ಎಂದು ದೂರಿದ್ದಾರೆ. ಈ ಹಗರಣವನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 13, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 316, 318ರ ಅಡಿ ತನಿಖೆ ನಡೆಸಲು ಅನುಮತಿ ನೀಡಬೇಕು ಹಾಗೂ ನಾರಾಯಣ ಸ್ವಾಮಿಯವರ ವಿಧಾನ ಪರಿಷತ್‌ನ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಎಂ.ಆರ್.ಸೀತಾರಾಂ, ಮಂಜುನಾಥ್ ಭಂಡಾರಿ, ಎಸ್.ರವಿ ವಸಂತಕುಮಾರ್, ಅನಿಲ್‌ಕುಮಾರ್, ದಿನೇಶ್ ಗೂಳಿಗೌಡ, ಪುಟ್ಟಣ್ಣ, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು ಸೇರಿದಂತೆ ಹಲವರು ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದರು. ಈ ಬಗ್ಗೆ ಮುಖ್ಯ ಸಚೇತಕ ಸಲೀಂ ಅಹಮದ್ ಅವರು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯನ್ನು ವಜಾ ಮಾಡಬೇಕು. ಹೌಸಿಂಗ್ ಬೋರ್ಡ್ ನಿರ್ದೇಶಕರಾಗಿದ್ದಾಗ ಸಿಎ ಸೈಟ್ ಪಡೆದುಕೊಂಡಿದ್ದರು. ಆದರ್ಶ ಸ್ಕೂಲ್ ಎಜುಕೇಶನ್ ಗ್ರೂಪ್ನ ಚೇರಮನ್ ಆಗಿದ್ದರು ಛಲವಾದಿ. ಇದೀಗ ಸಿಎ ಸೈಟ್ ಪಡೆದ ಜಾಗದಲ್ಲಿ ಆನಂದ್ ಧಂ ಬಿರಿಯಾನಿ ನಡೆಯುತ್ತಿದೆ. ಶಿಕ್ಷಣ ಉದ್ದೇಶಕ್ಕಾಗಿ ಪಡೆದಿರುವ ಸಿಎ ಸೈಟ್ನಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಶಿಕ್ಷಣ ಉದ್ದೇಶಕ್ಕೆ ಪಡೆದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ರಾಜ್ಯಪಾಲರಿಗೆ ಇದನ್ನು ವಿವರವಾಗಿ ತಿಳಿಸಿದ್ದೇವೆ ಎಂದರು.
ಐದು ವರ್ಷದಲ್ಲಿ ಶಾಲೆಯ ಕಟ್ಟಡ ಕಟ್ಟಬೇಕು ಎಂಬ ಕಂಡೀಷನ್ ಮೇಲೆ ಹೌಸಿಂಗ್ ಬೋರ್ಡ್ ನಿವೇಶನ ಪಡೆದಿದ್ದು ಇದೇ ನಿವೇಶನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಶಾಲೆ ಕಟ್ಟುವ ಬದಲು ಟೆಲಿ ಕಮ್ಯುನಿಕೇಷನ್ ಆ್ಯಂಡ್ ಪಬ್ಲಿಕ್ ಸರ್ವೀಸ್ ಕಂಪನಿ ಹೆಸರಿಗೆ ಈ ಜಾಗವನ್ನು ಮಾರ್ಪಾಡು ಮಾಡ್ತಾರೆ. ಸೇಲ್ ಡೀಡ್ ಆಗುವ ಮೊದಲೇ ಈ ರೀತಿ ಮಾರ್ಪಾಡು ಮಾಡಿರುತ್ತಾರೆ. ಯಾವಾಗ ಟೆಲಿ ಕಮ್ಯುನಿಕೇಷನ್ನಲ್ಲಿ ಛಲವಾದಿ ನಾರಾಯಣಸ್ವಾಮಿ ಎಕ್ಸ್ಪರ್ಟ್ ಆದರೋ ಅವರೇ ಹೇಳಬೇಕು ಎಂದು ಲೇವಡಿ ಮಾಡಿದರು.
A Congress delegation led by Saleem Ahmed, the State government’s chief whip in the Legislative Council, called on Governor Thaawarchand Gehlot at the Raj Bhavan on Tuesday and alleged that Leader of the Opposition Chalavadi T. Narayanaswamy was involved in a land grabbing case on the outskirts of Bengaluru and demanded his disqualification from the membership of the Council.
27-11-25 10:23 pm
HK News Desk
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ರೆಡಿಯಾಗುತ್ತಿದ...
27-11-25 08:14 pm
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ; ಕುಟುಂಬಸ...
27-11-25 06:30 pm
ಕಾಂಗ್ರೆಸ್ ಕಚ್ಚಾಟದಲ್ಲಿ ಯಾರು ಹೊರಬಂದರೂ ಬಿಜೆಪಿ ಬೆ...
27-11-25 04:27 pm
ಹೊಸಕೋಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಭೀ...
27-11-25 12:56 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
28-11-25 02:48 pm
Udupi Correspondent
Mangalore, Udupi, PM Narendra Modi, Krishna M...
28-11-25 11:29 am
ಪೊಲೀಸ್ ವಾರ್ಷಿಕ ಕ್ರೀಡಾಕೂಟ ; ನಾಗರಾಜ್ ಗೌಡ ಓಟದಲ್ಲ...
26-11-25 07:21 pm
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
28-11-25 06:23 pm
HK News Desk
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm