ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.
ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm