ಬ್ರೇಕಿಂಗ್ ನ್ಯೂಸ್
09-09-24 12:56 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.9: ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಹಾಗೂ ನಾಡಿನ ಹಿರಿಯ ಪತ್ರಕರ್ತ ವಸಂತ ನಾಡಿಗೇರ(59) ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು. ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಚಟುವಟಿಕೆಯಿಂದಿದ್ದ ವಸಂತ ನಾಡಿಗೇರ ಅವರು ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಫನ್ ಹೆಡ್ಡಿಂಗ್‌ಗಳ ಮೂಲಕ ಸುದ್ದಿ ಮನೆಗಳಲ್ಲಿ ಜನಪ್ರಿಯತೆ ಪಡೆದಿದ್ದರು.
ಸರಳ, ಸಜ್ಜನ ವ್ಯಕ್ತಿತ್ವದ ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.
ವಸಂತ ನಾಡಿಗೇರ ಅವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಅಲ್ಲಿಯೇ ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣ ಪಡೆದು ಧಾರವಾಡದಲ್ಲಿ ಬಿಎಸ್ಸಿ, ಎಂಎಸ್ಸಿ ಪದವಿ ಪಡೆದವರು. ರಸಾಯನ ಶಾಸ್ತ್ರ ಪದವೀಧರರಾದ ವಸಂತ ನಾಡಿಗೇರ ಅವರು ಪತ್ರಿಕೋದ್ಯಮದ ಸೆಳೆತಕ್ಕೆ ಒಳಗಾಗಿ ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟದಿಂದ ವೃತ್ತಿ ಜೀವನ ಆರಂಭಿಸಿದವರು. ಆನಂತರ ಕನ್ನಡ ಪ್ರಭ ಸೇರಿ ಅಲ್ಲಿ ಒಂದೂವರೆ ದಶಕ ಕಾಲ ಕೆಲಸ ಮಾಡಿದರು. ಬಳಿಕ ವಿಜಯಕರ್ನಾಟಕ ಪತ್ರಿಕೆಯ ಆರಂಭದಿಂದಲೂ ಮುಖ್ಯ ಉಪ ಸಂಪಾದಕರಾಗಿ ಅಲ್ಲಿಯೇ ಬಹುಕಾಲ ಸುದ್ದಿ ಸಂಪಾದಕರಾಗಿದ್ದರು. ಬಳಿಕ ವಿಶ್ವವಾಣಿ ಪತ್ರಿಕೆಯ ಸಂಪಾದಕರಾಗಿ ಸದ್ಯ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಸಾಕಷ್ಟು ಯುವ ಪತ್ರಕರ್ತರನ್ನೂ ಬೆಳೆಸಿದ್ದ ವಸಂತ ನಾಡಿಗೇರ್ ದಿಢೀರ್ ಹೃದಯಾಘಾತದಿಂದ ಅಸುನೀಗಿದ್ದಾರೆ.
ಮೆದು ಮಾತಿನ, ಹಾಸ್ಯಲಹರಿಯ ಮೂಲಕ ಪತ್ರಿಕಾ ಕಚೇರಿಯಲ್ಲಿ ಲವಲವಿಕೆ ವಾತಾವರಣ ಸೃಷ್ಟಿಸುತ್ತಿದ್ದ ವಸಂತ ನಾಡಿಗೇರ ಅವರಿಗೆ ಕನ್ನಡ ಭಾಷೆಯ ಮೇಲೆ ಅಪಾರ ಹಿಡಿತವಿತ್ತು. ಎಂತಹ ವರದಿಗೂ ಜನ ಮೆಚ್ಚುವಂತಹ ಶೀರ್ಷಿಕೆ ನೀಡುತ್ತಿದ್ದರು. ವಿಜಯಕರ್ನಾಟಕ ಪತ್ರಿಕೆಯಲ್ಲಿ ಅವರು ನೀಡಿದ ಶೀರ್ಷಿಕೆಗಳು ಮನೆ ಮಾತಾಗಿದ್ದವು. ಉತ್ತಮ ಬರಹಗಾರರೂ ಆಗಿದ್ದ ವಸಂತ ನಾಡಿಗೇರ ಅವರು ಕನ್ನಡ ಪ್ರಭದಲ್ಲಿ ಆರ್ಥಿಕ ವಿಶ್ಲೇಷಣೆ ಬರೆಯುತ್ತಿದ್ದರು. ಸಿನೆಮಾದಲ್ಲೂ ಆಸಕ್ತಿ ಇತ್ತು. ಲತಾ ಮಂಗೇಶ್ಕರ್ ಕುರಿತಾದ ಕೃತಿಯನ್ನು ಕನ್ನಡಕ್ಕೆ ತಂದಿದ್ದರು. ವಿಜಯ ಕರ್ನಾಟಕದಲ್ಲಿದ್ದಾಗ ಅವರ ಬಡಿಗೇರ್ ಹಾಗೂ ನಾಡಿಗೇರ್ ಎನ್ನುವ ಹಾಸ್ಯ ಅಂಕಣವೂ ಜನಪ್ರಿಯವಾಗಿತ್ತು. ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು.
Vasant Nadiger, the editor of Samyukta Karnataka and a veteran journalist, passed away early Monday morning at 3:13 am. Nadiger, who was a prominent figure in Kannada journalism, is survived by his wife, son, and daughter.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm