ಬ್ರೇಕಿಂಗ್ ನ್ಯೂಸ್
10-09-24 12:17 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಮುಡಾ ಪ್ರಕರಣದಲ್ಲಿ ಹೈಕೋರ್ಟ್ ವಿಚಾರಣೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೆ.12 ಡೆಡ್ ಲೈನ್ ಆಗಲಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಗಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇನ್ನೊಂದು ಸಿಟ್ಟಿಂಗಲ್ಲಿ ಮುಗಿಸುವ ಸುಳಿವನ್ನು ನ್ಯಾ. ಎಂ.ನಾಗಪ್ರಸನ್ನ ನೀಡಿದ್ದಾರೆ. ಹಾಗಾಗಿ, ಸಿದ್ದರಾಮಯ್ಯ ಪಾಲಿಗೆ ಗುರುವಾರದ ತೀರ್ಪು ಮಹತ್ವದ್ದಾಗಲಿದೆ. ಈ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ''ಇದು 22 ವರ್ಷಕ್ಕಿಂತ ಹಳೆಯ ಪ್ರಕರಣವಾಗಿದ್ದು ಪ್ರಾಥಮಿಕ ತನಿಖೆ ಅಗತ್ಯವಿದೆ. 17ಎ ಅಡಿ ಪ್ರಾಸಿಕ್ಯೂಷನ್‌ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಆದರೆ ರಾಜ್ಯಪಾಲರು ಪ್ರಾಥಮಿಕ ತನಿಖೆಯೇ ಇಲ್ಲದೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದು ಸರಿಯಲ್ಲ ಎಂದರು. ಅರ್ಜಿದಾರರ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಉತ್ತರಿಸಲು ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಕೋರ್ಟ್ ಮುಂದೂಡಿದೆ. ಇದೇ ವೇಳೆ, ಅದೇ ದಿನ ವಿಚಾರಣೆ ಮುಕ್ತಾಯಗೊಳಿಸಲಾಗುವುದು ಎಂದು ನ್ಯಾಯಪೀಠ ಹೇಳಿರುವುದು ವಿಶೇಷ.
ದೂರುದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್, ''ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಈ ಎಲ್ಲಾ ಚಟುವಟಿಕೆ ನಡೆದಿವೆ. ಪತ್ನಿಗೆ ಬೇರೆ ಆದಾಯದ ಮೂಲಗಳಿರಲಿಲ್ಲ. ಆದಾಯ ತೆರಿಗೆ ರಿಟರ್ನ್ ಅನ್ನು ಪತ್ನಿ ಫೈಲ್ ಮಾಡಿಲ್ಲ. ಹಾಗಾಗಿ ಪತ್ನಿಯ ಆಸ್ತಿಯನ್ನು ಪತಿಯ ಆಸ್ತಿ ಎಂದೇ ಪರಿಗಣಿಸಬೇಕಾಗುತ್ತದೆ. ಸಿದ್ದರಾಮಯ್ಯ ಮೇಲಿನ ಆರೋಪಗಳಿಗೆ ಸಾಕಷ್ಟು ಪುರಾವೆಗಳಿವೆ ಎಂದು ವಾದಿಸಿದರು.
The Karnataka High Court Bench hearing Chief Minister Siddaramaiah’s case against Governor Thaawar Chand Gehlot, on Monday adjourned the hearing to September 12. The Bench, headed by Justice M Nagaprasanna was looking into the writ petition filed by CM Siddaramaiah challenging the prosecution order against him by Governor Gehlot.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm