ಬ್ರೇಕಿಂಗ್ ನ್ಯೂಸ್
10-09-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರಾಜ್ಯದ ಕಾಂಗ್ರೆಸ್ ಸರಕಾರವು ರಾಷ್ಟ್ರೀಯ ಪಕ್ಷ ಬಿಜೆಪಿ ಕಚೇರಿಗೆ ಭದ್ರತೆ ಒದಗಿಸುವುದರಲ್ಲಿ ಹಿಂದೆ ಮುಂದೆ ನೋಡುತ್ತಿದೆ. ಐಸಿಸ್ ಉಗ್ರರು ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರೆನ್ನುವುದು ರಾಜ್ಯ ಸರ್ಕಾರದ ಬೇಹುಗಾರಿಕೆಯ ಅತ್ಯಂತ ದೊಡ್ಡ ವೈಫಲ್ಯ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಕಚೇರಿಯನ್ನು ಭಯೋತ್ಪಾದಕರು ಗುರಿಯಾಗಿ ಇಟ್ಟುಕೊಂಡಿದ್ದರು. ಅದು ಸಾಧ್ಯವಾಗದೇ ಇದ್ದಾಗ ರಾಮೇಶ್ವರಂ ಕೆಫೆಗೆ ಹೋಗಿ ಬಾಂಬ್ ಸ್ಫೋಟ ನಡೆಸಿದ್ದು ಎನ್‍ಐಎ ತನಿಖೆಯಲ್ಲಿ ಗೊತ್ತಾಗಿದೆ. ಇದೇ ವಿಚಾರವನ್ನು ಎನ್ಐಎ ಅಧಿಕಾರಿಗಳು ಕೋರ್ಟಿಗೆ ತಿಳಿಸಿದ್ದಾರೆ. ಐಸಿಸ್ ಉಗ್ರರು ಬಿಜೆಪಿ ಕಚೇರಿಯ ಸ್ಫೋಟಕ್ಕೆ ಸಂಚು ಹೂಡಿದ್ದರು ಎನ್ನುವುದು ರಾಜ್ಯದ ಗುಪ್ತಚರ ವಿಭಾಗದ ವೈಫಲ್ಯಕ್ಕೆ ಸಾಕ್ಷಿ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವರೇ ನೇರ ಹೊಣೆಗಾರರು ಎಂದು ಟೀಕಿಸಿದರು.
ರಾಷ್ಟ್ರೀಯ ಪಕ್ಷದ ಕಚೇರಿಯನ್ನು ಟಾರ್ಗೆಟ್ ಮಾಡಿದ್ದು ಗುಪ್ತಚರ ಸಂಸ್ಥೆಗೆ ಯಾಕೆ ಗೊತ್ತಾಗಿಲ್ಲ. ಗೊತ್ತಾದರೂ, ಅದನ್ನು ರಾಜ್ಯ ಸರ್ಕಾರ ಮುಚ್ಚಿಟ್ಟಿತ್ತೇ ಎನ್ನುವ ಶಂಕೆ ಇದೆ. ಇದಕ್ಕೆಲ್ಲ ಅಸಮರ್ಥ ಗೃಹ ಸಚಿವರೇ ಕಾರಣ. ಇವರಿಗೆ ತಮ್ಮ ಇಲಾಖೆಯಲ್ಲಿ ಏನಾಗುತ್ತಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎನ್ನುವ ಅರಿವೇ ಇಲ್ಲ. ಇಂಥ ಅಸಮರ್ಥ ಗೃಹ ಸಚಿವ ಪರಮೇಶ್ವರ್ ಕೂಡಲೇ ರಾಜೀನಾಮೆ ಕೊಡಬೇಕು ಅಥವಾ ಮುಖ್ಯಮಂತ್ರಿಗಳು ಅವರನ್ನು ವಜಾ ಮಾಡಬೇಕೆಂದು ಭಾಸ್ಕರ ರಾವ್ ಆಗ್ರಹಿಸಿದರು.
ಬೆಂಗಳೂರು ನಗರದಲ್ಲಿ ಬೇಹುಗಾರಿಕಾ ದಳ, ನಗರ ಭಯೋತ್ಪಾದನಾ ನಿಗ್ರಹ ದಳ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರಚಿಸಿದ ಆಂತರಿಕ ಭದ್ರತಾ ಇಲಾಖೆಗಳಿದ್ದು ಐಸಿಸ್ ಉಗ್ರರ ಸಂಚು ಅರಿಯುವಲ್ಲಿ ವಿಫಲವಾಗಿವೆ. ಈ ಸರಕಾರ ಅಧಿಕಾರಕ್ಕೆ ಬಂದು 16 ತಿಂಗಳಾದರೂ ಈ ವಿಭಾಗಗಳ ಒಂದೇ ಒಂದು ಅವಶ್ಯಕತೆಗಳನ್ನೂ ಈಡೇರಿಸಿಲ್ಲ. ಇದೇ ಕಾರಣಕ್ಕೆ ಎನ್‍ಐಎ, ಕರ್ನಾಟಕದಲ್ಲಿ ಮಾಹಿತಿ ಸಂಗ್ರಹ ಮಾಡುವುದಲ್ಲದೆ, ತಾನಾಗಿಯೇ ದಾಳಿ ನಡೆಸಿ ದುಷ್ಟರ ಬಂಧನಕ್ಕೆ ಮುಂದಾಗಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ, ಹಣದ ಪ್ರಭಾವದಿಂದ ಪೊಲೀಸ್ ಇಲಾಖೆ ಸರಿಯಾಗಿ ಕೆಲಸ ಮಾಡದಂತಾಗಿದೆ. ಇಲಾಖೆ ನಿಷ್ಕ್ರಿಯವಾಗಿದ್ದು, ರಾಜ್ಯದ ಜನರ ಸುರಕ್ಷತೆ ಜೊತೆ ಆಟವಾಡುವ ಸ್ಥಿತಿ ಬಂದಿದೆ ಎಂದು ಟೀಕಿಸಿದ ಅವರು, ಬೆಂಗಳೂರು ನಗರ ದೇಶ ಮಾತ್ರವಲ್ಲದೆ ವಿಶ್ವದ ಅತಿದೊಡ್ಡ ಹಣಕಾಸು ಕೇಂದ್ರವೆನಿಸಿದೆ. ಈ ನಗರಕ್ಕೆ ಸಿಗಬೇಕಾದಷ್ಟು ರಕ್ಷಣೆ ಸಿಗುತ್ತಿಲ್ಲ. ಕಡಿಮೆ ಸಂಖ್ಯೆಯ ಪೊಲೀಸ್ ವ್ಯವಸ್ಥೆಯಿಂದ ತನಿಖೆ ಕಾರ್ಯ ನಡೆದಿದೆ. ಸರಕಾರವು ತಾನು ಕಾನೂನು ಮತ್ತು ಸುವ್ಯವಸ್ಥೆಗೆ ಬೇಕಾದ ಮೂಲಸೌಕರ್ಯ ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
16 ತಿಂಗಳ ಆಡಳಿತ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಗೆ ಒಬ್ಬ ಎಸ್‍ಐ, ಒಬ್ಬ ಕಾನ್‍ಸ್ಟೇಬಲ್ ಅನ್ನೂ ಸೇರಿಸಿಲು ಆಗಿಲ್ಲ ಎಂದು ದೂರಿದರು. ಮಹಿಳಾ ಸುರಕ್ಷತೆಯತ್ತ ಗಮನ ಕೊಡುತ್ತಿಲ್ಲ. ಕೇಂದ್ರ ಸರಕಾರ ನೀಡುವ ನಿರ್ಭಯಾ ನಿಧಿಯನ್ನೂ ಬಳಸಿಲ್ಲ ಎಂದರು. ಭಯೋತ್ಪಾದನೆ, ಮಾದಕವಸ್ತು ನಿಯಂತ್ರಣದಲ್ಲಿಯೂ ಸರಕಾರ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವರು ಹೆಚ್ಚು ಸಕ್ರಿಯರಾಗಬೇಕಿತ್ತು. ಮಾದಕ ವಸ್ತು ಮಾರಾಟ, ಸಾಗಾಟ ಸಂಬಂಧ ಸಣ್ಣಪುಟ್ಟ ಮಾರಾಟಗಾರರನ್ನು ಗುರಿ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಬಿಜೆಪಿ ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
State intelligence failure is the reason for ISIS to target BJP office in Karnataka says former IPS officer Bhaskar Rao.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm