ಬ್ರೇಕಿಂಗ್ ನ್ಯೂಸ್
11-09-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.11: ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರೆ, ವಿಶೇಷ ಚೇತನರಾಗಿದ್ದರೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕಾರ ಸಂದರ್ಭದಲ್ಲಿ ಗುರುಕಿರಣ್ ಕುಟುಂಬಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.
ಘಟಿಕೋತ್ಸವದಲ್ಲಿ ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಿದರು. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಿದರು. ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಉಪಸ್ಥಿತರಿದ್ದರು.
In its 59th convocation, renowned music director Gurukiran and social worker KS Rajanna have been conferred honorary doctorate degrees by Bengaluru University.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm