ಬ್ರೇಕಿಂಗ್ ನ್ಯೂಸ್
12-09-24 09:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮಂಗಳೂರಿನ ಪಿಲಿಕುಲ ನಿಸರ್ಗಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳುನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಅದ್ದೂರಿಯಾಗಿ ನಡೆಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.
ಗುರುವಾರ ವಿಧಾನಸಭಾ ಕಚೇರಿ ಸಭಾಂಗಣದಲ್ಲಿ ಪಿಲಿಕುಳ ಕಂಬಳ, ತುಳುನಾಡ ಉತ್ಸವದ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಿಲಿಕುಲದಲ್ಲಿ ಕೆಲವೊಂದು ಶಾಶ್ವತವಾದ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿ ಪಡಿಸಲು ಸಂಘಟಿತ ಪ್ರಯತ್ನ ನಡೆಸಬೇಕು. ತುಳುನಾಡು ಉತ್ಸವದ ಮೂಲಕ ಕಂಬಳ ಸೇರಿದಂತೆ ಕಲೆ, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಕೃಷಿಮೇಳ, ಆಹಾರ ಮೇಳಗಳನ್ನು ನಡೆಸುವ ಚಿಂತನೆ ಇದೆ. ಈ ಬಗ್ಗೆ ಸಂಸದರು, ಶಾಸಕರು, ಅಧಿಕಾರಿಗಳು, ಇತರ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಲಹೆ ಪಡೆದು ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ ಕಾರ್ಯಯೋಜನೆ ರೂಪಿಸಲು ಯು.ಟಿ.ಖಾದರ್ ಸಲಹೆ ನೀಡಿದರು.
ತುಳುನಾಡು ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್ ನಲ್ಲಿ ಉತ್ಸವಕ್ಕೆ ಅನುದಾನ ನಿಗದಿ ಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಿಲಿಕುಳದ ಅಭಿವೃದ್ಧಿ ಹಾಗೂ ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಒಳ್ಳೆಯ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದರು, ಶಾಸಕರು, ಅಧಿಕಾರಿಗಳ ಸಮಾಲೋಚನಾ ಸಭೆ ಕರೆಯುವುದಾಗಿ ತಿಳಿಸಿದ್ದಾರೆ.
ಸಂಸದ ಬೃಜೇಶ್ ಚೌಟ ಮಾತನಾಡಿ ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಅಶೋಕ್ ಕುಮಾರ್ ರೈ, ಡಾ.ಮಂಜುನಾಥ ಭಂಡಾರಿ, ಐವನ್ ಡಿಸೋಜ, ಭೋಜೇ ಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Pilikula kamabala meeting held in Bangalore, Speaker UT Khader gives suggestions.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm