ಬ್ರೇಕಿಂಗ್ ನ್ಯೂಸ್
18-09-24 04:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 18: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಗೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳಿಂದ ನಮಗೆ ಆತಂಕವಿದೆ. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
ನೋವು ನಿವಾರಕ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುದನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು
ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲಾ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.
ಪಾಕ್ ಪರ ಘೋಷಣೆ ಬಗ್ಗೆ ಪರಿಶೀಲನೆ:
"ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ" ಎಂದು ಸ್ಪಷ್ಟಪಡಿಸಿದರು.
ಶಾಸಕ ಮುನಿರತ್ನ ಬಂಧನ ಪ್ರಕರಣ:
"ಶಾಸಕ ಮುನಿರತ್ನರನ್ನು ಏಕಾಏಕಿ ಬಂಧಿಸಿಲ್ಲ. ಅವರ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್ಎಲ್ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ" ಎಂದರು.
"ಕಳೆದ ವರ್ಷ ಗಣೇಶ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ" ಎಂದು ತಿಳಿಸಿದರು.
Home minister Dr G Parameshwar raises concern over pain killer tablets, says drug mafia in control in state.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm