ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆಗೆ ಆಕ್ಷೇಪ ; ವರದಿ ಕೇಳಿದ ಸುಪ್ರೀಂ ಕೋರ್ಟ್, ಲೈವ್ ಸ್ಟ್ರೀಮ್ ರದ್ದುಪಡಿಸಲು ವಕೀಲರ ಆಗ್ರಹ 

20-09-24 09:41 pm       Bangalore Correspondent   ಕರ್ನಾಟಕ

ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಆಕ್ಷೇಪ ವ್ಯಕ್ತವಾಗಿದ್ದು ಲೈವ್ ಸ್ಟ್ರೀಮ್ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಲೇ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್‌ ನಿಂದ ವರದಿ ಕೇಳಿದೆ. 

ಬೆಂಗಳೂರು, ಸೆ.20: ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಆಕ್ಷೇಪ ವ್ಯಕ್ತವಾಗಿದ್ದು ಲೈವ್ ಸ್ಟ್ರೀಮ್ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಲೇ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್‌ ನಿಂದ ವರದಿ ಕೇಳಿದೆ. 

ಜಸ್ಟಿಸ್ ಶ್ರೀಶಾನಂದ ಅವರು ಬೆಂಗಳೂರಿನಲ್ಲಿ ಮುಸ್ಲಿಂ ಬಾಹುಳ್ಯವಿರುವ ಗೋರಿಪಾಳ್ಯ ಪ್ರದೇಶವನ್ನು “ಪಾಕಿಸ್ತಾನ” ಎಂದು ಉಲ್ಲೇಖಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ರಸ್ತೆ ನಿಮಯಕ್ಕೆ ಅನ್ವಯಿಸುವುದಿಲ್ಲ. ಏಕೆಂದರೆ ಗೋರಿಪಾಳ್ಯದಿಂದ ಮಾರುಕಟ್ಟೆ ವರೆಗಿನ ಮೈಸೂರು ರಸ್ತೆಯ ಮೇಲ್ಸೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಇರಿಸಿದರೂ ಅಷ್ಟೇ.. ಎಂದು ಪೊಲೀಸರ ನಡೆಯ ಬಗ್ಗೆ ಪಾಕಿಸ್ತಾನ ಉದಾಹರಿಸಿ ಆಕ್ಷೇಪ  ವ್ಯಕ್ತಪಡಿಸಿದ್ದರು. 

ಸಿಜೆಐ ಡಿವೈ ಚಂದ್ರಚೂಡ್‌, ಜ.ಎಸ್.ಖನ್ನ, ಬಿ.ಆರ್.ಗವಾಯಿ, ಎಸ್.ಕಾಂತ್‌ ಮತ್ತು ಎಚ್.ರಾಯ್‌ ಅವರಿದ್ದ ಸುಪ್ರೀಂ ಕೋರ್ಟಿನ ಪಂಚ ಸದಸ್ಯರ ಪೀಠವು, ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರು ನ್ಯಾಯಾಲಯದಲ್ಲಿ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಸ್ಥಾಪಿಸುವ ಅಗತ್ಯವನ್ನು ವ್ಯಕ್ತಪಡಿಸಿದರು. ನ್ಯಾಯಾಲಯದ ಕಲಾಪಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಸಾಮಾಜಿಕ ಮಾಧ್ಯಮವು ಸಕ್ರಿಯ ಪಾತ್ರವನ್ನು ವಹಿಸಿದಾಗ, ನ್ಯಾಯಾಂಗದ ವ್ಯಾಖ್ಯಾನವು ನ್ಯಾಯಾಲಯದಿಂದ ನಿರೀಕ್ಷಿತ ಸಭ್ಯತೆಯೊಂದಿಗೆ ಹೊಂದಾಣಿಕೆ ಯಾಗುವುದನ್ನು ಖಚಿತಪಡಿಸಿಕೊಳ್ಳುವುದು ತುರ್ತು ಅಗತ್ಯ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. 

ನ್ಯಾಯಾಲಯದ ಕಲಾಪದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಆಡಿರುವ ಮಾತಿನ ಬಗ್ಗೆ ಮಾಧ್ಯಮ ವರದಿಗಳ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಸೆಳೆಯಲಾಗಿದೆ. ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಮುಂದಿನ ವಾರ ಬುಧವಾರಕ್ಕೆ ನಿಗದಿಪಡಿಸಲಾಗಿದೆ. 

ಇದೇ ವೇಳೆ, ನ್ಯಾಯಾಧೀಶರ ಮಾತಿನ ಬಗ್ಗೆ ವಿವಾದ ಉಂಟಾಗಲು ವಿಡಿಯೋ ಲೈವ್ ಸ್ಟ್ರೀಮ್ ಕಾರಣ. ಲೈವ್ ಮಾಡುವುದನ್ನು ನಿಲ್ಲಿಸಬೇಕೆಂದು ಹೈಕೋರ್ಟ್ ವಕೀಲರು ಆಗ್ರಹ ಮಾಡಿದ್ದಾರೆ.

Supreme Court on Friday took cognizance of Karnataka High Court judge’s remark referring to a Muslim-dominated locality in Bengaluru as “Pakistan". Leading a five-judge bench, Chief Justice of India (CJI) DY Chandrachud said, “Why we have assembled here is because of videos of Karnataka HC judge making some gratuitous remark."