ಬ್ರೇಕಿಂಗ್ ನ್ಯೂಸ್
21-09-24 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆಗೆ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣ ಮತ್ತು ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ, ಹನಿಟ್ರ್ಯಾಪ್ ಪ್ರಕರಣದ ತನಿಖೆ ನಡೆಸಲು ಸಿಐಡಿ ವಿಶೇಷ ತನಿಖಾ ತಂಡಕ್ಕೆ ಜವಾಬ್ದಾರಿ ನೀಡಲಾಗಿದೆ.
ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣಗಳನ್ನು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ದಾಖಲಿಸಿದ್ದರೆ, ಅತ್ಯಾಚಾರ ಪ್ರಕರಣವನ್ನು ಬಿಜೆಪಿ ಕಾರ್ಯಕರ್ತೆಯೊಬ್ಬರು ದಾಖಲಿಸಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದರೂ ರೇಪ್ ಕೇಸ್ನಲ್ಲಿ ಮುನಿರತ್ನ ಕಗ್ಗಲಿಪುರ ಪೊಲೀಸರ ಬಂಧನದಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಇದರ ಮಧ್ಯೆ ಮುನಿರತ್ನ ಅವರದ್ದು ಎನ್ನಲಾದ ಆಡಿಯೋದಲ್ಲಿ ಒಕ್ಕಲಿಗ ಸಮುದಾಯ ಮತ್ತು ದಲಿತರನ್ನು ನಿಂದಿಸಿದ್ದ ಆರೋಪದಲ್ಲಿ ಎಸ್ಐಟಿ ತನಿಖೆಗೆ ಕಾಂಗ್ರೆಸ್ನ ಒಕ್ಕಲಿಗ ಸಮುದಾಯದ ಶಾಸಕರು, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.
ಇದೀಗ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಮಹತ್ವದ ಆದೇಶ ಹೊರಡಿಸಿದ್ದು, ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸಮಗ್ರ ತನಿಖೆಗೆ ಒಳಪಡಲಿದೆ. ಪ್ರಸ್ತುತ ಸಿಐಡಿ ಆರ್ಥಿಕ ಅಪರಾಧಗಳ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದೆ.
ಎಸ್ಐಟಿಯಲ್ಲಿ ಮುಖ್ಯಸ್ಥರಾಗಿ ಬಿಕೆ ಸಿಂಗ್: (ಅಪರ ಪೊಲೀಸ್ ಮಹಾ ನಿರ್ದೇಶಕರು, ಆರ್ಥಿಕ ಅಪರಾಧಗಳು ಸಿಐಡಿ), ಲಾಬುರಾಮ್, ಐಪಿಎಸ್ (ಪೊಲೀಸ್ ಮಹಾ ನಿರ್ದೇಶಕರು ಕೆಂದ್ರ ವಲಯ), ಸೌಮ್ಯಲತಾ, ಐಪಿಎಸ್ ( ಪೊಲೀಸ್ ಅಧೀಕ್ಷಕರು ರೈಲ್ವೇಸ್), ಸಿಎ ಸೈಮನ್, ಪೊಲೀಸ್ ಅಧೀಕ್ಷಕರು ಸದಸ್ಯರಾಗಿ ಇರುತ್ತಾರೆ.
The Karnataka government on Saturday issued the order to form a Special Investigation Team (SIT) to probe the cases against the BJP MLA Munirathna. The SIT will be headed by the Additional Director General of Police (Economic Offences, CID) BK Singh. Inspector General of Police (Central Range) Labhu Ram, Superintendent of Police (Railways) Soumyalatha and CA Simon, SP awaiting a posting,were the other members of the probe team, the government order stated.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm