ಬ್ರೇಕಿಂಗ್ ನ್ಯೂಸ್
22-09-24 07:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.22: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ಇಡೀ ದೇಶದಲ್ಲಿ ಪ್ರಸಿದ್ಧ. ತಿರುಪತಿ ಲಡ್ಡು ಅತಿ ಪವಿತ್ರ ಎಂಬ ಭಾವನೆಯಿಂದ ಅದನ್ನು ಇತರೇ ದೇವಸ್ಥಾನಗಳಲ್ಲಿಯೂ ವಿತರಣೆ ಮಾಡುವ ಪದ್ಧತಿ ಇದೆ. ಆದರೆ ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು ಬಳಸುತ್ತಿರುವ ವಿಚಾರ ಕೇಳಿ ಹಿಂದು ಭಕ್ತರು ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ತಿರುಪತಿ ಲಡ್ಡನ್ನು ರಾಜ್ಯದ ದೇವಸ್ಥಾನಗಳಲ್ಲಿ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘ ತೀರ್ಮಾನಿಸಿದೆ.
ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನೆಣ್ಣೆ ಸೇರಿದಂತೆ ಇನ್ನಿತರ ಕಲಬೆರಕೆ ಪದಾರ್ಥಗಳನ್ನು ಬಳಸಲಾಗಿದೆ ಎನ್ನುವ ಪ್ರಯೋಗಾಲಯ ವರದಿ ದೇಶಾದ್ಯಂತ ಶಾಕಿಂಗ್ ಅಲೆ ಸೃಷ್ಟಿಸಿದೆ. ಈ ಸುದ್ದಿಯ ಬೆನ್ನಲ್ಲೇ ರಾಜ್ಯದ ಅರ್ಚಕರೆಲ್ಲ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ತಿರುಪತಿ ಲಡ್ಡು ಪ್ರಸಾದವನ್ನು ರಾಜ್ಯದ ಯಾವುದೇ ದೇವಸ್ಥಾನಗಳಲ್ಲಿ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘ ತೀರ್ಮಾನಿಸಿದೆ.
ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ನಡೆದಿಲ್ಲ ಎನ್ನುವ ಬಗ್ಗೆ ಸ್ಪಷ್ಟತೆ ಸಿಗುವರೆಗೂ ಪ್ರಸಾದವನ್ನು ನಾವು ಯಾರೂ ಬಳಸುವುದಿಲ್ಲ ಎಂದು ಸಂಘದ ಸದಸ್ಯರು ಪ್ರಕಟಣೆ ಹೊರಡಿಸಿದ್ದಾರೆ. ರಾಜ್ಯದ ಮುಖ್ಯ ದೇವಸ್ಥಾನಗಳಲ್ಲಿ ನಡೆಯುತ್ತಿದ್ದ ಕಲ್ಯಾಣೋತ್ಸವ, ಮದುವೆ, ಗೃಹಪ್ರವೇಶ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಈ ತಿರುಪತಿಯ ಲಡ್ಡು ಪ್ರಸಾದವನ್ನು ಪ್ರಧಾನವಾಗಿ ಬಳಕೆ ಮಾಡಲಾಗುತ್ತಿತ್ತು.
ಆದರೆ, ಇದೀಗ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವ ಆರೋಪ ಕೇಳಿ ಬಂದಿರುವುದರಿಂದ ಲಡ್ಡು ಪ್ರಸಾದವನ್ನು ಬಳಸದಿರಲು ಅರ್ಚಕರು ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ವೇಳೆ, ರಾಜ್ಯ ಸರ್ಕಾರ ಕೂಡ ಎಚ್ಚೆತ್ತುಕೊಂಡಿದ್ದು, ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಪ್ರಸಾದ ಇನ್ನಿತರ ಉದ್ದೇಶಕ್ಕಾಗಿ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ತಿಳಿಸಿದೆ.
The laddu prasadam of tirupati temple is famous in the entire country. Tirupati laddu is considered sacred and is distributed in other temples as well. However, Hindu devotees were shocked to hear about the use of cow fat in the preparation of laddus. Hence, the All Karnataka Priests Association has decided not to use tirupati laddu in temples in the state.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm