ಬ್ರೇಕಿಂಗ್ ನ್ಯೂಸ್
23-09-24 07:46 pm HK News Desk ಕರ್ನಾಟಕ
ರಾಮನಗರ, ಸೆ 23: ಮಧ್ಯರಾತ್ರಿ ಇಬ್ಬರು ಯುವತಿಯರನ್ನು ಅಪಾರ್ಟ್‌ಮೆಂಟ್‌ಗೆ ಕರೆತಂದಿದ್ದನ್ನು ಪ್ರಶ್ನಿಸಿದ ಭದ್ರತಾ ಸಿಬ್ಬಂದಿಗೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ, ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್‌ವರ್ತ್ ಅಪಾರ್ಟ್‌ಮೆಂಟ್‌ನಲ್ಲಿ ಇತ್ತೀಚೆಗೆ ನಡೆದಿದೆ.
ವರುಣ್ ಹಲ್ಲೆ ಮಾಡಿದ ಯುವಕ. ಪುನೀತ್ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ. ಘಟನೆಗೆ ಸಂಬಂಧಿಸಿದಂತೆ, ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್.ಸಿ ಮಾಡಿಕೊಳ್ಳಲಾಗಿದೆ.
ವಕೀಲಿಕೆ ವೃತ್ತಿ ಪ್ರಾಕ್ಟೀಸ್ ಮಾಡುತ್ತಿರುವ ವರುಣ್, ಸೆ. 19ರಂ ತನ್ನ ಸ್ನೇಹಿತನೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್‌ಗೆ ಇಬ್ಬರು ಯುವತಿಯರನ್ನು ರಾತ್ರಿ 12ರ ಸುಮಾರಿಗೆ ಕರೆ ತಂದಿದ್ದ. ಆಗ ಕರ್ತವ್ಯದಲ್ಲಿದ್ದ ಪುನೀತ್ ಅವರು, 12ರ ನಂತರ ಅಪರಿಚಿತರಿಗೆ ಅಪಾರ್ಟ್‌ಮೆಂಟ್‌ಗೆ ಪ್ರವೇಶವಿಲ್ಲ ಎಂಬ ನಿಯಮವಿದೆ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ವರುಣ್, ಪುನೀತ್ ಅವರ ಕೆನ್ನೆ ಮತ್ತು ತಲೆಗೆ ಹೊಡೆದಿದ್ದಾನೆ.
‘ನಾನ್ಯಾರು ಗೊತ್ತಾ? ಡಿಸಿಪಿ ಮಗ ಕಣಲೇ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ, ನಾಳೆ ಬೆಳಿಗ್ಗೆ ನೀನು ಇಲ್ಲಿ ಕೆಲಸಕ್ಕೆ ಇರ್ತಿಯಾ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿಸುತ್ತಾ ವರುಣ್ ಹಲ್ಲೆ ನಡೆಸುತ್ತಿರುವ ವಿಡಿಯೊವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದಿದ್ದಾರೆ. ಅಲ್ಲದೆ, ಆತ ಅಪಾರ್ಟ್‌ಮೆಂಟ್ ಒಳಕ್ಕೆ ಯುವತಿಯರನ್ನು ಕರೆದೊಯ್ದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿವೆ.
ಹಲ್ಲೆಯಿಂದಾಗಿ ಕಿವಿಗೆ ಗಾಯವಾಗಿದ್ದು, ಸರಿಯಾಗಿ ಕೇಳಿಸುತ್ತಿಲ್ಲ ಎಂದು ಪುನೀತ್ ಅವರು ನೀಡಿದ ದೂರಿನ ಮೇರೆಗೆ ಎನ್.ಸಿ ಮಾಡಿಕೊಳ್ಳಲಾಗಿದೆ. ಆರೋಪಿ ವರುಣ್‌ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#bengaluru ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ: ಸಿಎಂ ಸಂಬಂಧಿ ಎಂದು ಧಮ್ಕಿ; ಯುವಕ ಬಂಧನ #Siddaramaiah #kumbalagodu @XpressBengaluru @BlrCityPolice
— kannadaprabha (@KannadaPrabha) September 21, 2024
ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್‌ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು… pic.twitter.com/vHKd2xATiO
Bangalore cops file case as youth assaults guard, claims to be son of police DCP, CM relative. Karnataka police have slapped a case on a 21-year-old youth for assaulting a security guard of an apartment building for refusing entry to his friends in Bengaluru. Arrested youth has been identified as Varun.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm