ಬ್ರೇಕಿಂಗ್ ನ್ಯೂಸ್
24-09-24 10:39 pm HK News Desk ಕರ್ನಾಟಕ
ಕಾರವಾರ, , ಸೆ.24: ಭ್ರಷ್ಟಾಚಾರದ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಹಾಜರಾಗಿದ್ದರು
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಹಾಜರಾಗಿದ್ದರು.
ಜಿ.ಪಂ.ಸದಸ್ಯತ್ವದ ಅಧಿಕಾರದಲ್ಲಿದ್ದಾಗ ಜ.2011 ರಿಂದ ನ.2012 ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ಸರ್ಕಾರದಿಂದ ಗೌರವಧನ 88,630 ರೂ. ಪಡೆದುಕೊಂಡಿದ್ದಾರೆ. ಒಟ್ಟು ಎರಡು ಹುದ್ದೆಗಳನ್ನು ಹೊಂದಿದ್ದು, ಜನಪ್ರತಿನಿಧಿಯಾದ ನಂತರವೂ ಅಂಗನವಾಡಿ ಕಾರ್ಯಕರ್ತೆಯೆಂದು ಗೌರವಧನ ಪಡೆದು, ಸರ್ಕಾರಕ್ಕೆ ಮೋಸ ಮಾಡಿದ್ದಾಗಿ ಆರೋಪಿಸಲಾಗಿತ್ತು.
ಉಷಾ ರವೀಂದ್ರ ಹೆಗಡೆ ಏಕಕಾಲದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ಪಂಚಾಯತ್ ಬದನಗೋಡ ಕ್ಷೇತ್ರದ ಸದಸ್ಯತ್ವ ಹುದ್ದೆಯನ್ನು ಸರಿಯಾಗಿ ನಿಭಾಯಿಸದೇ ಹಾಗೂ ಅಂಗನವಾಡಿ ಕರ್ತವ್ಯದಲ್ಲಿಯೂ ಸರಿಯಾಗಿ ಹಾಜರಿರದೇ, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಜರಾತಿ ಪುಸ್ತಕದಲ್ಲಿ ಹಾಜರಿರುವುದಾಗಿ ಸುಳ್ಳು ಸಹಿ ಮಾಡಿದ್ದಾರೆ ಮತ್ತು ಈ ಮೂಲಕ ಭಾರತೀಯ ದಂಡ ಸಹಿತ ಕಲಂ 468ರ ಮೇರೆಗೆ ದಂಡನೀಯವಾದ ಅಪರಾಧವನ್ನು ಎಸಗಿದ್ದಾಗಿ ಆರೋಪಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಇಬ್ರಾಹಿಂ ನಬಿಸಾಬ್ ದೂರು ನೀಡಿದ್ದು, ಲೋಕಾಯುಕ್ತ ಪರ ಕಾರವಾರದ ಎಲ್.ಎಂ.ಪ್ರಭು ವಾದಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಹುದ್ದೆ ಮಾಡಲು ಬರುವುದಿಲ್ಲ. ಸರ್ಕಾರದ ಆದೇಶದಂತೆ ಒಂದು ಹುದ್ದೆಗೆ ರಾಜೀನಾಮೆ ನೀಡಿ ಎಂದು ಮೌಖಿಕವಾಗಿ ಹಾಗೂ ಲಿಖಿತವಾಗಿ ಸೂಚಿಸಲಾಗಿತ್ತು. ಆದರೂ ಉಷಾ ಹೆಗಡೆ ಇಲಾಖೆಯ ಆದೇಶ ಹಾಗೂ ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ನೀಡಿದ ಆದೇಶವನ್ನು ಧಿಕ್ಕರಿಸಿದ್ದರು. ಈ ಅಂಶಗಳನ್ನು ಜಿಲ್ಲಾ ಪ್ರಧಾನ ಸೆಷನ್ಸ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.
Karwar Sirsi Usha Hegde of zilla panchyath sentenced to one year jail and 5 thousand rs fine.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm