Siddaramaiah, FIR, Muda case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಕಡೆಗೂ ಎಫ್ಐಆರ್ ದಾಖಲು ; ಕೋರ್ಟ್ ಸೂಚನೆಯಂತೆ ಪ್ರಕರಣ, ಎ ವನ್ ಸಿದ್ದರಾಮಯ್ಯ, ಪತ್ನಿ 2ನೇ ಆರೋಪಿ ! 

27-09-24 05:07 pm       HK News Desk   ಕರ್ನಾಟಕ

ಮುಡಾ ನಿವೇಶನ ಅಕ್ರಮ ಪ್ರಕರಣ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು, ಸೆ.27: ಮುಡಾ ನಿವೇಶನ ಅಕ್ರಮ ಪ್ರಕರಣ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಅಧಿಕಾರಿಗಳು ಎಫ್​ಐಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. 

ಸಿದ್ದರಾಮಯ್ಯ ವಿರುದ್ಧ IPC 120B, 166, 403, 406, 420, 426, 465, 468, 340, 351 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ ನೀಡಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸೆಕ್ಷನ್ 9 ಮತ್ತು 13 ರ ಅಡಿ ಕೇಸ್​​, ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಸೆಕ್ಷನ್ 53 &  54 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚಿಸಿತ್ತು. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಸೂಚಿಸಿತ್ತು. ಅದೇ ಪ್ರಕಾರ, ಲೋಕಾಯುಕ್ತ ಅಧಿಕಾರಿಗಳು ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ‌

ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ ವನ್ ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ A 3, ಭೂಮಾಲೀಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ.

Lokayukta police here on Friday registered a First Information Report (FIR) against Chief Minister Siddaramaiah and others in the Mysuru Urban Development Authority (MUDA) site allotment case, following the court order, official sources said.