ಬ್ರೇಕಿಂಗ್ ನ್ಯೂಸ್
27-09-24 11:03 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ಮೇಲೆಯೂ ಅಂಥಹದ್ದೇ ಭೂಹಗರಣ ಸುತ್ತಿಕೊಳ್ಳುವ ಸಾಧ್ಯತೆ ಎದುರಾಗಿದೆ. ಈ ಕುರಿತಾಗಿ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.
ಖರ್ಗೆ ಕುಟುಂಬದ ಏಳು ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದರಲ್ಲಿ ಎಂ.ಬಿ.ಪಾಟೀಲ್ ಮತ್ತು ಐಎಎಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್ಗೆ ಐದು ಎಕರೆ ಭೂಮಿಯನ್ನು ಸಿಎ ಸೈಟ್ ರೂಪದಲ್ಲಿ ನೀಡಿರುವುದಾಗಿ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಸಮೀಪದಲ್ಲಿ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್ ಹೆಸರಿನಲ್ಲಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಮಲ್ಲಿಕಾರ್ಜುನ ಖರ್ಗೆ, ಪುತ್ರರಾದ ಪ್ರಿಯಾಂಕ್ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಮತ್ತು ಕುಟುಂಬದ ಹೆಸರಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಶೈಕ್ಷಣಿಕ ಉದ್ದೇಶಕ್ಕೆಂದು ಅಕ್ರಮವಾಗಿ ಎರಡೆರಡು ಬಾರಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ.
2014ರಲ್ಲಿ ಬಿಟಿಎಂ 4ನೇ ಸ್ಟೇಜ್ನ ಎರಡನೇ ಬ್ಲಾಕ್ನಲ್ಲಿ 2 ಎಕರೆ ಬಿಡಿಎ ವ್ಯಾಪ್ತಿಯ ಸಿಎ ನಿವೇಶನ, 2024ರಲ್ಲಿ ಬಾಗಲೂರು ಬಳಿ 5 ಎಕರೆಯಷ್ಟು ಕೆಐಎಡಿಬಿ ಭೂಮಿಯನ್ನು ಮತ್ತೆ ಇವರ ಒಡೆತನದ ಟ್ರಸ್ಟ್ಗೆ ಪರಭಾರೆ ಮಾಡಿಕೊಳ್ಳಲಾಗಿದೆ. ಈ ಎರಡೂ ನಿವೇಶನಗಳನ್ನು ಒಂದೇ ಸಂಸ್ಥೆಗೆ ಒಂದೇ ಉದ್ದೇಶಕ್ಕೆ ಈ ಟ್ರಸ್ಟ್ ಪಡೆದುಕೊಂಡಿದೆ. ಈ ಎರಡೂ ನಿವೇಶನಗಳ ಪ್ರಸ್ತುತ ಒಟ್ಟು ಮೌಲ್ಯ ಬರೋಬ್ಬರಿ 240 ಕೋಟಿ ರೂ. ಅಧಿಕ ಮೊತ್ತ ಎನ್ನಲಾಗಿದೆ.
ಇದೇ ವೇಳೆ, ಖರ್ಗೆ ಕುಟುಂಬದ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿರುವ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಶ ಮಾಹಿತಿಯೊಂದಿಗೆ ಅಭಿಪ್ರಾಯ ಕೇಳಿದ್ದಾರೆ. ಕಾನೂನು ತಜ್ಞರು ರಾಜ್ಯಪಾಲರಿಗೆ ಅಭಿಪ್ರಾಯ ಸಲ್ಲಿಕೆ ಮಾಡಿದ್ದು ಖರ್ಗೆ ಕುಟುಂಬದ ವಿರುದ್ದೆವೂ ತನಿಖೆ ಎದುರಾಗುವ ಸಾಧ್ಯತೆ ಇದೆ.
Ramesh NR, a prominent leader of the Bharatiya Janata Party (BJP) in Karnataka, has lodged a formal complaint with the Karnataka Lokayukta against Congress president Mallikarjun Kharge and several others, alleging that the Siddhartha Vihar Trust, purportedly owned by Kharge's family, is involved in a land grab scheme.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm