ಬ್ರೇಕಿಂಗ್ ನ್ಯೂಸ್
28-09-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯಕ್ಕೂ (ಇಡಿ) ದೂರು ನೀಡಿದ್ದಾರೆ.
59 ಕೋಟಿ ರೂ. ಮೌಲ್ಯದ 14 ಸೈಟುಗಳ ಹಗರಣದಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ಇ-ಮೇಲ್ ಮೂಲಕ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರವನ್ನು ಇಡಿ ಬೆಂಗಳೂರು ನಿರ್ದೇಶಕರಿಗೆ ಬರೆದಿದ್ದು ಮನಿ ಲ್ಯಾಂಡರಿಂಗ್ ಆ್ಯಕ್ಟ್ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರೇ ಎ-1 ಆರೋಪಿಯಾಗಿದ್ದು, ತನಿಖೆಯ ಟೆನ್ಷನ್ ಶುರುವಾಗಿದೆ. ಶನಿವಾರ, ಭಾನುವಾರ ಲೋಕಾಯುಕ್ತ ಕಚೇರಿಗೆ ರಜೆ ಇರುವ ಕಾರಣದಿಂದ ಸೋಮವಾರದಿಂದ ಅಧಿಕೃತ ತನಿಖೆ ಶುರುವಾಗಲಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಬ್ಬಂದಿ ಸಭೆ ನಡೆಸಿದ ಎಸ್‌ಪಿ ಉದೇಶ್, ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಿದ್ದಾರೆ. ಎಸ್‌ಪಿ ಉದೇಶ್, ಡಿವೈಎಸ್ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್ಸ್ಪೆಕ್ಟರ್ ಒಳಗೊಂಡ ನಾಲ್ಕು ತನಿಖಾ ತಂಡಗಳ ರಚನೆ ಮಾಡಲಾಗಿದೆ.
The FIR registered against Chief Minister Siddaramaiah by the Lokayukta in connection with illegal allotment of sites to his wife by Mysuru Urban Development Authority (MUDA) was based on the complaint of a common citizen and has upheld the supremacy of the Constitution, according to activist Snehamayi Krishna.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm