ಬ್ರೇಕಿಂಗ್ ನ್ಯೂಸ್
30-09-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಜಿಗಣಿ ಬಳಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬ ಭಾರತದ ಗುರುತು ಚೀಟಿಯನ್ನೂ ಮಾಡಿಸಿ ತನ್ನ ವಿದೇಶಿ ಮೂಲ ಬಚ್ಚಿಟ್ಟು ಕುಟುಂಬದ ಜೊತೆಗೆ ಠಿಕಾಣಿ ಹೂಡಿದ್ದ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಮೂಲತಃ ಪಾಕಿಸ್ತಾನದ ಪ್ರಜೆಯಾಗಿದ್ದು ಧರ್ಮದ ವಿಚಾರದ ಭಿನ್ನಾಭಿಪ್ರಾಯದಿಂದ ಪಾಕ್ ಬಿಟ್ಟು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯನ್ನು ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದಿದ್ದು ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ ಈ ವ್ಯಕ್ತಿ 2018ರಲ್ಲಿ ಕುಟುಂಬದ ಜೊತೆಗೆ ಬೆಂಗಳೂರಿಗೆ ಬಂದಿದ್ದ.
ಇಬ್ಬರು ಮಕ್ಕಳ ಜೊತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ಸಮೇತ ವಾಸವಿದ್ದ ಬಗ್ಗೆ ಮಾಹಿತಿ ತಿಳಿದು ಜಿಗಣಿ ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳೆಂದು ಪ್ರಕರಣ ದಾಖಲಿಸಿದ್ದಾರೆ.
Four Pakistani nationals who were living in the outskirts of Bengaluru under different identities were arrested on Sunday. Police said the suspects Rashid Ali Siddiqui (48), his wife Ayesha (38) and her parents Hanif Mohammed (73) and Rubina (61) lived in Rajapura village under the aliases Shankar Sharma, Asha Rani, Ram Babu Sharma and Rani Sharma.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm