ಬ್ರೇಕಿಂಗ್ ನ್ಯೂಸ್
01-10-24 11:19 am Bangalore Correspondent ಕರ್ನಾಟಕ
ಬೆಂಗಳೂರು, ಅ.1: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಇತ್ತ ಮುಖ್ಯಮಂತ್ರಿಗಳ ಪತ್ನಿ ವಿವಾದಕ್ಕೆ ಕಾರಣವಾದ 14 ಸೈಟ್ ಗಳನ್ನೇ ಸರ್ಕಾರಕ್ಕೆ ಹಿಂದಕ್ಕೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ತಮಗೆ ಹಂಚಿಕೆ ಮಾಡಲಾದ ಎಲ್ಲಾ 14 ಸೈಟ್‌ಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ. 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರ ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿತ್ತು. ಇದಕ್ಕೆ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4ನೇ ಹಂತದಲ್ಲಿ ನನಗೆ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ಇದನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಪಾರ್ವತಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ದೂರುದಾರ ಸ್ನೇಹಮಯಿ ಕೃಷ್ಣ ದೂರಿನಂತೆ, ಮುಡಾ ಹಗರಣ ಕುರಿತಾಗಿ ಜಾರಿ ನಿರ್ದೇಶನಾಲಯದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದರ ಬೆನ್ನಲ್ಲೇ ಕಾನೂನು ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದು, ಇಡಿ ದಾಖಲಿಸಿರುವ ಇಸಿಐಆರ್ ಗೆ ತಡೆಯಾಜ್ಞೆ ಕೋರಿ ಮಂಗಳವಾರವೇ ಇ.ಡಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಗೌಪ್ಯ ಸ್ಥಳದಲ್ಲಿ ಆಪ್ತ ಸಚಿವರು ಹಾಗೂ ಕಾನೂನು ತಜ್ಞರೊಂದಿಗೆ ಸಿದ್ದರಾಮಯ್ಯ ಸುದೀರ್ಘ ಸಮಾಲೋಚನೆ ನಡೆಸಿದರು. ಎಐಸಿಸಿ ವರಿಷ್ಠರನ್ನೂ ಸಂಪರ್ಕಿಸಿ ಸಲಹೆ ಪಡೆಯಲಾಗಿದ್ದು, ತಕ್ಷಣಕ್ಕೆ ಇಸಿಐಆರ್‌ಗೆ ಇ.ಡಿ. ವಿಶೇಷ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದಾರೆ.
Karnataka Chief Minister Siddaramaiah’s wife, BM Parvathi, in a letter to the Mysuru Urban Development Authority (MUDA) said she would return the land sites she had received from the authority. She said that she had never pursued any personal gain during her husband’s long political honour and no material possession could outweigh her husband’s clean image. The chief minister said that while he is surprised by her decision, he respects it.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm