ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್‌ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm