ಬ್ರೇಕಿಂಗ್ ನ್ಯೂಸ್
01-10-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ಅ 1: ಮುಖ್ಯಮಂತ್ರಿ ಮಾಡಲು 1,000 ಕೋಟಿ ಹಣ ಕೂಡಿಡಲಾಗಿದೆ ಎಂಬ ಯತ್ನಾಳ್ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ದಾಖಲಿಸಿದೆ. 1,000 ಕೋಟಿ ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪಿಎಂಎಲ್‌ಎ ಅಡಿ ಕೇಸ್ ಕೂಡ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಇಸಿಐಆರ್ ದಾಖಲು ಕುರಿತು ಉಗ್ರಪ್ಪ ಪ್ರತಿಕ್ರಿಯಿಸಿ, ಬಿಜೆಪಿಯ ಯತ್ನಾಳ್ ಸಾವಿರ ಕೋಟಿ ಇಟ್ಟುಕೊಂಡಿದ್ದೇವೆ ಎಂದರು ಕ್ರಮವಾಗಿಲ್ಲ. ಬಿಜೆಪಿಯು ಏನೇ ಷಡ್ಯಂತ್ರ ಮಾಡಿದರೂ ಕಾನೂನು ಮೂಲಕ ಹೋರಾಟ ಮಾಡುತ್ತೇವೆ. ಸಿದ್ದರಾಮಯ್ಯ ಹಾಗೂ ಪಕ್ಷಕ್ಕೆ ಇದನ್ನು ಎದುರಿಸುವ ಶಕ್ತಿಯಿದೆ. ನೋಟಿಸ್ ಎಲ್ಲಾ ಮುಂದಿನ ಪ್ರಕ್ರಿಯೆ. ಅದರ ಬಗ್ಗೆ ನಾನು ಮಾತನಾಡಲ್ಲ. ಕಾನೂನು ಮೂಲಕ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ
ದಾವಣಗೆರೆಯಲ್ಲಿ ಮಾತನಾಡಿದ ಬಸವನಗೌಡ ಪಾಟೀಲ್ ಯತ್ನಾಳ್, 'ಮಹಾನ್' ನಾಯಕರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ ಎಂದು ಭಾನುವಾರ ಅಚ್ಚರಿಯ ಸಂಗತಿಯನ್ನ ಬಹಿರಂಗಪಡಿಸಿದ್ರು.
ಮಹಾನ್ ನಾಯಕ ಯಾರು ಎಂಬುದು ನಿಮಗೆ ಗೊತ್ತಿದೆ. ನಾನು ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಈ ಹಿಂದೆ ಅವರ ಮನೆಯಲ್ಲಿ ಕರೆನ್ಸಿ ನೋಟು ಎಣಿಸುವ ಯಂತ್ರ ಪತ್ತೆಯಾಗಿತ್ತು. ಅವರು ಡಿಸೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಹೇಳಿಕೆ ನೀಡಿದ್ರು.
ಇನ್ನು ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಯತ್ನಾಳ್ ಹೇಳಿಕೆ ಬಗ್ಗೆ ನಮಗೂ ಮಾಹಿತಿ ಇದೆ. ಈ ಸಂಬಂಧ ಆದಾಯ ತೆರಿಗೆ ಇಲಾಖೆಯಿಂದ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ನಮ್ಮ ಸರ್ಕಾರವನ್ನು ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಅಷ್ಟೊಂದು ಹಣ ಎಲ್ಲಿಂದ ಬಂತು? ಎಲ್ಲದರ ಬಗ್ಗೆ ಆದಾಯ ತೆರಿಗೆ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿ. ಈ ಬಗ್ಗೆ ನಾವು ಕೂಡ ನಮ್ಮ ಲೀಗಲ್ ಟೀಂ ಜೊತೆ ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
Yatnal slams DK Shivakumar of 100 crore rs deal to be next cm, congress file case against yatnal fr his remarks. DK Shivakumar also stated that let there be a income tax probe in this matter he added.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm