ಬ್ರೇಕಿಂಗ್ ನ್ಯೂಸ್
03-10-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಅ.3: ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣರಾಗಿದ್ದರೂ ಮಾಡರ್ನಿಸ್ಟ್ ಆಗಿದ್ದರು. ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೆ ವಿರುದ್ಧವಾಗಿರಲಿಲ್ಲ. ಗೋಮಾಂಸವನ್ನೂ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.
ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಆದರೆ, ಅವರು ಮಾಡರ್ನ್ ಕೂಡ ಆಗಿದ್ದರು. ಅವರು ಗೋಮಾಂಸ ಸೇವಿಸುತ್ತಿದ್ದರು ಎಂದೂ ಕೆಲವು ಜನ ಹೇಳುತ್ತಿದ್ದಾರೆ ಎಂದಿದ್ದರು.
ಮಹಾತ್ಮ ಗಾಂಧಿ ಸಸ್ಯಾಹಾರಿಯಾಗಿದ್ದರು. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲಿತ್ತು. ಅವರು ಡೆಮಾಕ್ರಟಿಕ್ ಆಗಿದ್ದರು. ಅವರಲ್ಲಿ ಹಿಂದು ರಾಷ್ಟ್ರದ ಕಲ್ಪನೆ ಇತ್ತು. ಆದರೆ ಧಾರ್ಮಿಕವಾಗಿ ಅಲ್ಲ, ಸಾಂಸ್ಕೃತಿಕವಾಗಿ ಹಿಂದು ರಾಷ್ಟ್ರದ ಕಲ್ಪನೆ ಇತ್ತು ಎಂದು ಗುಂಡೂರಾವ್ ಹೇಳಿದ್ದರು. ಮೊಹಮ್ಮದ್ ಅಲಿ ಜಿನ್ನಾ ಕೂಡ ಡೆಮಾಕ್ರಟಿಕ್ ಆಗಿದ್ದರು. ಅವರು ಕೂಡ ಕಟ್ಟಾ ಇಸ್ಲಾಂ ವಾದಿಯಾಗಿರಲಿಲ್ಲ. ಅವರು ವೈನ್ ಕುಡಿಯುತ್ತಿದ್ದರು, ಹಂದಿ ಮಾಂಸ ಸೇವನೆ ಮಾಡಿದ್ದರು ಎಂದು ಅನೇಕರು ಹೇಳುತ್ತಾರೆ ಎಂದೂ ಗುಂಡೂರಾವ್ ಹೇಳಿದ್ದಾರೆ.
ಇವರ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ಹಿಂದುಗಳ ಬಗ್ಗೆ ಮಾತ್ರ ಅವಹೇಳನ ಮಾತನಾಡುತ್ತೀರಿ ಎಂದು ಟೀಕಿಸಿದ್ದಾರೆ. ಬಿಜೆಪಿ ಐಟಿ ಸೆಲ್ ನಿಂದ ನೇರ ಟ್ವೀಟ್ ಮಾಡಿದ್ದು, ದಿನೇಶ್ ಗುಂಡೂರಾವ್ ಅವರೇ, ಬ್ರಾಹ್ಮಣ ಸಮಾಜದ ವೀರ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್ ಅವರು ಹೇಳಿದ್ದರೋ..??" ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಸಾವರ್ಕರ್ ಸತ್ತು ಸ್ವರ್ಗದಲ್ಲಿದ್ದಾರೆ, ಇನ್ನಾದರೂ ಬಿಡಿ ಅವರನ್ನು. ಕೊನೆಗೆ ಹೆಣ್ಣು ಮಕ್ಕಳು ಬಳೆಯೂ ಹಾಕಬಾರದು ಎಂಬ ಮನಸ್ಥಿತಿಗೆ ಕಾಂಗ್ರೆಸ್ ಬಂದು ಬಿಡುತ್ತದೆಯೋ ಏನೋ? ಹಿಂದೂ ಧರ್ಮವನ್ನು ಟೀಕಿಸುವುದನ್ನು ಬಿಟ್ಟರೆ ಕಾಂಗ್ರೆಸ್ಸಿನವರಿಗೆ ಬೇರೆ ಕಸುಬೇ ಇಲ್ಲವೇ ಎಂದು ವಿಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
Congress leader and Karnataka Health Minister Dinesh Gundu Rao sparked a controversy with his remarks on Vinayak Damodar Savarkar being a non-vegetarian and not against cow slaughter. At an event in Bengaluru organised to mark Gandhi Jayanti, Dinesh Gundu Rao claimed that Savarkar was not only a meat-eater, who consumed beef, but also propagated the practice publicly.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm