ಬ್ರೇಕಿಂಗ್ ನ್ಯೂಸ್
07-10-24 09:41 pm HK News Desk ಕರ್ನಾಟಕ
ಬೆಂಗಳೂರು, ಅ.7: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಚರ್ಚೆ ಜೋರಾಗಿರುವ ನಡುವೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಕುತೂಹಲದ ಕೇಂದ್ರವಾಗಿ ಬದಲಾಗಿದೆ. ಡಿ.ಕೆ. ಸುರೇಶ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲ ಕೆರಳಿಸಿದೆ.
ಈವರೆಗೂ ಕಾಂಗ್ರೆಸ್ ನಾಯಕರು ಜಾರಕಿಹೊಳಿ ಅವರನ್ನು ಭೇಟಿ ಮಾಡುತ್ತಿದ್ದರು. ಈಗ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿಯಿತ್ತು ಮಾತುಕತೆ ನಡೆಸಿರುವುದು ರಾಜಕೀಯದಲ್ಲಿ ನಾನಾ ಅರ್ಥಗಳನ್ನು ಕಲ್ಪಿಸಿದೆ. ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅನೇಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡ ನಿನ್ನೆ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು ಎನ್ನುವ ಸೂಚನೆಗಳಿವು ಎಂದು ಹೇಳಿದರು.
ಆದರೆ ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರೈತರು ಹಾಗೂ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿರುವ ಶಿಕಾರಿಪುರ ಕ್ಷೇತ್ರದ ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್‌ಗಳನ್ನು ಸ್ಥಳಾಂತರಿಸುವಂತೆ ಒತ್ತಾಯ ಮಾಡಿದ್ದೇನೆ, ಅದು ಬಿಟ್ಟರೆ ಬೇರಾವ ಚರ್ಚೆಯೂ ನಡೆದಿಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜಿನಾಮೆ ಬಗ್ಗೆ ಒತ್ತಾಯ ಕೇಳಿಬರುತ್ತಿರುವ ಹೊತ್ತಿನಲ್ಲಿ ದಲಿತ ವರ್ಗದ ಸಚಿವರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಇದಲ್ಲದೆ, ಸಿದ್ದರಾಮಯ್ಯ ಬದಲಾದರೆ ಮುಂದಿನ ಮುಖ್ಯಮಂತ್ರಿ ದಲಿತ ವರ್ಗದವರೇ ಆಗಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯರನ್ನು ಭೇಟಿ ಮಾಡಿ ಬಂದ ಬೆನ್ನಲ್ಲೇ ಬೆಳಗಾವಿ ಸಾಹುಕಾರ್ ಮನೆ ಪವರ್ ಸೆಂಟರ್ ಆಗಿ ಬದಲಾಗಿದೆ.
ಇತ್ತ ಸಚಿವರು, ಶಾಸಕರು ಜಾರಕಿಹೊಳಿ ಮನೆಯತ್ತ ಸಾಲುಗಟ್ಟಿ ನಿಲ್ಲುತ್ತಿದ್ದರೆ ಮುಂದಿನ ಸಿಎಂ ಸ್ಥಾನಕ್ಕೆ ಟವೆಲ್ ಹಾಕಿರುವ ಡಿಕೆಶಿ ಪರವಾಗಿ ತಮ್ಮ ಡಿಕೆ ಸುರೇಶ್ ಕೂಡ ಭೇಟಿಯಾಗಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಸತೀಶ್ ಜಾರಕಿಹೊಳಿ ಭೇಟಿಯಾಗಿ ಚರ್ಚಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್- ಜೆಡಿಎಸ್ ಸರಕಾರವನ್ನು ಬೀಳಿಸಲು ರಮೇಶ್ ಜಾರಕಿಹೊಳಿ ಕಾರಣವಾಗಿದ್ದರು. ಬೆಳಗಾವಿ ಸಾಹುಕಾರ್ ನೇತೃತ್ವದಲ್ಲೇ ಸರ್ಕಾರ ಪತನವಾಗಿತ್ತು. ಈಗ ಮತ್ತೆ ಬೆಳಗಾವಿ ಸಾಹುಕಾರ್ ರಾಜಕೀಯದ ಪವರ್ ಪಾಯಿಂಟ್ ಆಗಿರುವುದು ರಾಜಕೀಯ ಕಣ ಕುತೂಹಲ ಕೆರಳಿಸಿದೆ.
Karnataka BJP president B Y Vijayendra and Public Works Department (PWD) Minister Satish Jarkiholi met on Monday, causing a stir within the state’s political circles. Both leaders, however, said the meeting had no political significance.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm