ಬ್ರೇಕಿಂಗ್ ನ್ಯೂಸ್
09-10-24 04:47 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋ ಕೊಡುವುದಾಗಿ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತ ಮಹಿಳೆ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ನೀಡಿದ್ದಾರೆ. ಮುನಿರತ್ನ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರ ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಅದೇ ರೀತಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನೂ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ದರ್ಜೆಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿ ವಿಡಿಯೋ ಮಾಡಿಟ್ಟಿದ್ದಾರೆ. ಬೇಕಿದ್ದರೆ ನನ್ನ ಹಾಗೂ ಮುನಿರತ್ನ ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಬಿಜೆಪಿ ನಾಯಕರಾದ ಅಶ್ವತ್ಥ ನಾರಾಯಣ, ಆರ್. ಅಶೋಕ್ ಗೆ ಸಂತ್ರಸ್ತ ಮಹಿಳೆ ಸವಾಲು ಹಾಕಿದ್ದಾರೆ.
ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ. ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದ ಐದಾರು ಸಂತ್ರಸ್ತ ಮಹಿಳೆಯರು ಹೆದರಿ ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು. ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಅವರದ್ದು 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತನಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಅವರನ್ನು ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲಾ ಎಂದು ಅವರನ್ನು ಕೇಳಬೇಕಿದೆ ಎಂದು ಹೇಳಿದ್ದಾರೆ.
MLA Munirathna honey trap case, many Mla and police officers trapped blackmailed of sex videos says victim harrassed by MLA. Munirathna has Blackmailed several higher police officers and MLA's she alleged.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm