Congress MLA Vinay Kulkarni, rape, Power TV: ಬೆಂಗಳೂರು ಮತ್ತು ಧರ್ಮಸ್ಥಳದಲ್ಲಿ ತನ್ನ ಮೇಲೆ ಅತ್ಯಾಚಾರ ; ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ದೂರು, ಅವಳನ್ನು ಟಚ್ ಮಾಡಿದ್ರೂ ತಾಯಿಗೆ ಮುಟ್ಟಿದಂತೆ ಎಂದ ಕುಲಕರ್ಣಿ 

09-10-24 09:47 pm       Bangalore Correspondent   ಕರ್ನಾಟಕ

ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ 34 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಿದ್ದು ಇದರಂತೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಬೆಂಗಳೂರು, ಅ.9: ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ 34 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಿದ್ದು ಇದರಂತೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಮಹಿಳೆಯ ದೂರಿನಂತೆ, ಪೊಲೀಸರು ವಿನಯ್ ಕುಲಕರ್ಣಿ ಅವರನ್ನು A1 ಆರೋಪಿ ಮತ್ತು ಅವರ ಆಪ್ತ ಸಹಾಯ ಅರ್ಜುನ್ ಅನ್ನು A2 ಆರೋಪಿ ಎಂದು ಹೆಸರಿಸಿ ಎಫ್‌ಐಆ‌ರ್ ದಾಖಲಿಸಿದ್ದಾರೆ. 

2022ರಲ್ಲಿ ಶಾಸಕರನ್ನು ಭೇಟಿ ಮಾಡಿದ್ದೆ. ಬಳಿಕ ರೈತರೊಬ್ಬರಿಂದ ನನ್ನ ಫೋನ್ ಪಡೆದಿದ್ದ ಶಾಸಕರು, ರಾತ್ರಿ ವೇಳೆಯೂ ನನಗೆ ಕರೆ ಮಾಡಲು ಪ್ರಾರಂಭಿಸಿದ್ದರು. ಕೆಲವು ತಿಂಗಳ ನಂತರ, ಬೆತ್ತಲೆಯಾಗಿದ್ದಾಗ ವೀಡಿಯೊ ಕರೆ ಮಾಡುವಂತೆ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದಾಗ ಶಾಸಕರ ಮನೆಗೆ ಹೋಗದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೌಡಿಗಳ ತಂಡವೊಂದು ಬೆದರಿಕೆ ಹಾಕಿತ್ತು.‌ ಆಗಸ್ಟ್ 24, 2022 ರಂದು, ಕುಲಕರ್ಣಿ ಅವರು ಬಿಜೆಪಿಯಿಂದ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ಬೆಂಗಳೂರಿನಲ್ಲಿದ್ದಾಗ ಸಂತ್ರಸ್ತೆಯನ್ನು ತಮ್ಮ ಮನೆಗೆ ಕರೆದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮಹಿಳೆ ಕುಲಕರ್ಣಿ ಮನೆಗೆ ಬಂದಿದ್ದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. 

ಕುಲಕರ್ಣಿ ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದು  ಕಾರಿನೊಳಗೆ ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಅಲ್ಲದೇ, ಈ ವಿಷಯದ ಬಗ್ಗೆ ಸುಮ್ಮನಿರುವಂತೆ ವಿನಯ ಕುಲಕರ್ಣಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ನಡೆಸಿ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಸುತ್ತೇನೆ ಎಂದು ಆಮಿಷವೊಡ್ಡಿದ್ದರು. 

ಶಾಸಕರು ಅಂದು ನಿರ್ಜನ ಪ್ರದೇಶಕ್ಕೆ ನನ್ನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದರು. ಅಕ್ಟೋಬರ್ 2ರಂದು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಮರುದಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ಯಾರಿಗೂ ವಿಚಾರ ತಿಳಿಸದಂತೆ ಬೆದರಿಕೆ ಹಾಕಿದರು. ನಂತರ ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವಂತೆ ಅರ್ಜುನ್ ಅವರಿಗೆ ಸೂಚಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506, 504, 201, 366, 376, 323, 354 ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅವಳನ್ನು ಟಚ್ ಮಾಡಿದರೂ ತಾಯಿಗೆ ಟಚ್ ಮಾಡಿದಂತೆ ! 

ಇದರ ಬೆನ್ನಲ್ಲೇ ತನ್ನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆ ವಿರುದ್ಧವೇ ಶಾಸಕ ವಿನಯ್ ಕುಲಕರ್ಣಿ ಪ್ರತಿ ದೂರು ದಾಖಲಿಸಿದ್ದಾರೆ. ಈಕೆ ಅಧಿಕಾರಿಗಳು, ರಾಜಕೀಯ ನಾಯಕರಿಗೂ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ. ಸಂತ್ರಸ್ತೆ ಸಂಚು ರೂಪಿಸಿ ತನ್ನ ಮಾನಹಾನಿ ಮಾಡಿದ್ದಾರೆಂದು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ತಮ್ಮ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ನಾನು ಅವಳನ್ನು ಟಚ್ ಮಾಡಿದರೂ ನನ್ನ ತಾಯಿಯನನ್ನ ಟಚ್ ಮಾಡಿದಂತೆ. ಇಷ್ಟೇ ಹೇಳುತ್ತೇನೆ ಎಂದು ಹೇಳುವ ಮೂಲಕ ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ. ಇದಲ್ಲದೆ, ಮಹಿಳೆಯ ಜೊತೆಗೆ ವಿಡಿಯೋ ಮುಂದಿಟ್ಟು ಖಾಸಗಿ ಸುದ್ದಿ ವಾಹಿನಿಯ ಎಂಡಿಯೊಬ್ಬರು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದಾರೆಂದು ದೂರು ನೀಡಿದ್ದಾರೆ.

Bengaluru police on October 8 registered an FIR against Dharwad MLA Vinay Kulkarni. Vinay had filed a complaint on October 7 against the woman and Rakesh Shetty, the managing director of Power TV, a Kannada news channel. In his complaint, Vinay accused the woman and Rakesh Shetty of attempting to extort Rs 2 crore from him.