ಬ್ರೇಕಿಂಗ್ ನ್ಯೂಸ್
11-10-24 03:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸುವಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಾಗಾಗಿ ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶೇ. 50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1 ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯವಾದದ್ದು. ಆ ದಿನ ಎಲ್ಲಾ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳು ಕೂಡ ಯಾರ ಮೇಲೂ ಒತ್ತಡ ಹೇರಬಾರದು. ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಿಸಲಿದ್ದಾರೆ ಎಂದಿದ್ದಾರೆ.
Karnataka Deputy Chief Minister DK Shivakumar on Friday announced that all institutions in the state, including IT companies, factories, and other establishments, should hoist the Kannada flag on November 1.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm