ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm