ಬ್ರೇಕಿಂಗ್ ನ್ಯೂಸ್
15-10-24 01:14 pm Bangalore Correspondent ಕರ್ನಾಟಕ
ಬೆಂಗಳೂರು, ಅ.15: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 2022ರಲ್ಲಿ ನಡೆದ ಹಳೇ ಹುಬ್ಬಳ್ಳಿ ಗಲಭೆ ಮತ್ತು ಪೊಲೀಸ್ ಠಾಣೆ ಮೇಲಿನ ದಾಳಿ ಸಂಬಂಧಿತ ದೇಶದ್ರೋಹಿ ಕೃತ್ಯದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ನಿರ್ಧರಿಸಿದೆ.
ಮುಸ್ಲಿಂ ಓಲೈಕೆಗಾಗಿ ದೇಶದ್ರೋಹಿಗಳ ಮೇಲಿನ ಪ್ರಕರಣವನ್ನು ಹಿಂಪಡೆಯುತ್ತಿದ್ದಾರೆ ಎಂದು ಬಿಜೆಪಿ ನಾಯಕರು ದೂರಿದ್ದರೆ, ಕಾಂಗ್ರೆಸ್ ನಾಯಕರು ಸಮರ್ಥನೆ ಮಾಡಿದ್ದಾರೆ. ಇಷ್ಟಕ್ಕೂ ಹಳೇ ಹುಬ್ಬಳ್ಳಿ ಪ್ರಕರಣ ಏನಿತ್ತು, ಯಾಕಾಗಿ ಹಿಂಸಾಚಾರ ಆಗಿತ್ತು ಎನ್ನೋದ್ರ ವಿವರಣೆ ಇಲ್ಲಿದೆ.
ಏಪ್ರಿಲ್ 16, 2022 ರ ಸಂಜೆ ಹಳೇ ಹುಬ್ಬಳ್ಳಿಯಲ್ಲಿ ಮುಸ್ಲಿಮರ ಬಗ್ಗೆ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಾನೆಂದು ಆಕ್ರೋಶ ಭುಗಿಲೆದ್ದಿತ್ತು. ಮುಸಲ್ಮಾನ ಸಮುದಾಯದ ಜನರು ಆಕ್ರೋಶಗೊಂಡು ಹಳೇ ಹುಬ್ಬಳ್ಳಿ ಠಾಣೆಗೆ ತೆರಳಿ ಯುವಕನನ್ನು ಬಂಧಿಸುವಂತೆ ಆಗ್ರಹಿಸ ತೊಡಗಿದ್ದರು. ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಯುವಕನನ್ನು ಬಂಧಿಸಿದ್ದರು. ಆದರೆ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ ಜನರು ಆತನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದರು. ಪೊಲೀಸ್ ಅಧಿಕಾರಿಗಳು ಸಮುದಾಯದ ಮುಖಂಡರೊಂದಿಗೆ ಮಾತನಾಡುತ್ತಿರುವಾಗಲೇ ಕೆಲವು ಕಿಡಿಗೇಡಿಗಳು ಪೊಲೀಸರು, ಪೊಲೀಸ್ ವಾಹನಗಳು ಮತ್ತು ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಿಡಿಗೇಡಿಗಳ ಆಕ್ರೋಶ ನಿಯಂತ್ರಣ ತಪ್ಪಿದಾಗ, ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಉದ್ರಿಕ್ತರ ಗುಂಪನ್ನು ಚದುರಿಸಲು ರಬ್ಬರ್ ಗುಂಡುಗಳನ್ನು ಹಾರಿಸಿದ್ದರು. ಆದರೆ, ಕಿಡಿಗೇಡಿಗಳ ದಾಳಿ ಸಾರ್ವಜನಿಕರು ಮತ್ತು ಹತ್ತಿರದ ದೇವಸ್ಥಾನಗಳ ಮೇಲೆ ತಿರುಗಿತ್ತು. ಪೊಲೀಸರು ಬಳಿಕ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಯತ್ನಿಸಿದ್ದರು.
ಅಂದು ರಾತ್ರಿ ನಡೆದ ಹಿಂಸಾಚಾರದಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸರು ಘಟನೆಯ ವೀಡಿಯೊ ರೆಕಾರ್ಡಿಂಗ್ ಆಧರಿಸಿ 150ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದರು. ಠಾಣೆಗೆ ಬೆಂಕಿ ಹಚ್ಚುವ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೆಲವು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬೆಂಗಳೂರಿನ ಡಿಜಿ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ನಡೆದ ಹಿಂಸಾತ್ಮಕ ಘಟನೆ ಮಾದರಿಯಲ್ಲೇ ಈ ಪ್ರಕರಣ ಇದೆ ಎಂದು ಪ್ರಕರಣ ದಾಖಲಿಸಲಾಗಿತ್ತು.
ಬಿಜೆಪಿ ಅಧಿಕಾರದಲ್ಲಿರುವವರೆಗೂ ಆರೋಪಿಗಳು ಜೈಲಿನಲ್ಲೇ ಇದ್ದರು. ಜಾಮೀನು ಪಡೆಯುವ ಪ್ರಯತ್ನವೂ ವಿಫಲವಾಗಿತ್ತು. 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಸಿದ್ದರಾಮಯ್ಯ ಸರ್ಕಾರಕ್ಕೆ ತಮ್ಮ ಮೇಲಿನ ಪ್ರಕರಣ ಹಿಂಪಡೆಯುವಂತೆ ಮನವಿಗಳು ಬಂದಿದ್ದವು. ಪ್ರತಿಭಟನೆ ಸಲುವಾಗಿ ಘಟನೆ ನಡೆದಿತ್ತು. ಅಷ್ಟಕ್ಕೇ ದೇಶದ್ರೋಹಿ ಕೃತ್ಯ ಹಾಕಿದ್ದಾರೆ ಎಂದು ಕಾಂಗ್ರೆಸ್ ನಾಯಕರ ಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿಗಳು ಹೋಗಿದ್ದವು.
ಈ ನಡುವೆ, ಸುಪ್ರೀಂ ಕೋರ್ಟ್ ಡಿಸೆಂಬರ್‌ನಲ್ಲಿ 35 ಆರೋಪಿಗಳಿಗೆ ಜಾಮೀನು ನೀಡಿದ್ದರೆ, ಈ ವರ್ಷದ ಫೆಬ್ರವರಿಯಲ್ಲಿ 111 ಮಂದಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. ಇದೀಗ ಹುಬ್ಬಳ್ಳಿ ಘಟನೆಯ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.
Congress govt in withdraws case against Hubballi rioters who attacked police. This was one of the 43 cases the state Cabinet decided to withdraw at its meeting on Thursday following a petition by the Anjuman-e-Islam to the Home Minister G Parameshwara, official sources said.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm