ಬ್ರೇಕಿಂಗ್ ನ್ಯೂಸ್
15-10-24 06:13 pm Bangalore Correspondent ಕರ್ನಾಟಕ
ಬೆಂಗಳೂರು, ಅ 15: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಮುನಿರತ್ನ ನಾಯ್ಡುಗೆ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಜಾಮೀನನ್ನು ನೀಡಿದೆ. ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪ ಮಾಡಿದ್ದರು.
ಆರ್ ಆರ್ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ್ದ ಆಡಿಯೋ ಒಂದು ವೈರಲ್ ಆಗಿತ್ತು. ಈ ಆಡಿಯೋದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಕೋಲಾರ ಮತ್ತು ಆಂಧ್ರಪ್ರದೇಶ ಗಡಿ ಭಾಗದಲ್ಲಿ ವಶಕ್ಕೆ ಪಡೆದುಕೊಂಡು ಬಳಿಕ ಬಂಧನ ಮಾಡಿದ್ದರು.
ಈ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ ಜಾಮೀನು ಸಿಕ್ಕರೂ ಮುನಿರತ್ನಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದರು. ಆರ್ ಆರ್ ನಗರದ ಮಹಿಳೆಯೊಬ್ಬರು ಮುನಿರತ್ನ ವಿರುದ್ದ ಗಂಭೀರ ಆರೋಪ ಮಾಡಿದ್ದರು.
ಮುನಿರತ್ನ ಅವರು ನನ್ನ ವಿರುದ್ಧ ಸರಣಿಯಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ತಮ್ಮ ವಿರೋಧಿಗಳನ್ನು ಹಣಿಯಲು ಹನಿಟ್ರ್ಯಾಪ್‌ಗಾಗಿ ನನ್ನನ್ನು ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಬಂಧನ ಮಾಡಲಾಗಿತ್ತು. ಅಲ್ಲದೆ, ಮುನಿರತ್ನ ಪ್ರಕರಣದಲ್ಲಿ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು.
ಮುನಿರತ್ನ ಅವರ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ಬಿಜೆಪಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ಇದಕ್ಕೆ ಪಕ್ಷದಲ್ಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಮುನಿರತ್ನ ವಿರುದ್ಧ ರಾಜಕೀಯ ಪ್ರೇರಿತವಾಗಿ ದೂರು ದಾಖಲು ಮಾಡಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದು ಪರ ಹಾಗೂ ವಿರೋಧ ಚರ್ಚೆಗೆ ಗ್ರಾಸವಾಗಿತ್ತು.
A special court in Bengaluru granted an anticipatory bail on Monday evening to BJP MLA Muniratna and three other accused in a rape case, reported PTI. Along with Muniratna, Lohit, Kiran, and Manjunath were three others who were granted bail by Judge Santhosh Gajanan Bhat.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm