ಬ್ರೇಕಿಂಗ್ ನ್ಯೂಸ್
17-10-24 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಮುಸ್ಲಿಂ ಸಮುದಾಯದ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ವಕ್ಫ್ ಮಂಡಳಿಗೆ ವಹಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದ್ದು ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಇಂದಿರಾ ನಗರದ ನಿವಾಸಿ ಎ. ಆಲಂಪಾಷ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ನ್ಯಾಯಪೀಠ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಮತ್ತು ವಕ್ಫ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಮುಸ್ಲಿಂ ದಂಪತಿಗಳಿಗೆ ವಿವಾಹ ನೋಂದಣಿ ಮಾಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ವಹಿಸಿ 2023ರ ಆಗಸ್ಟ್ 3 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರಂತೆ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮತ್ತು ಜಿಲ್ಲಾ ವಕ್ಫ್ ಸಲಹಾ ಸಮಿತಿಗಳು ಕೆಲ ಷರತ್ತುಗಳೊಂದಿಗೆ ಮುಸ್ಲಿಂ ದಂಪತಿಗಳಿಗೆ ವಿವಾಹ ನೋಂದಣಿ ಮಾಡುವುದಕ್ಕೆ ಅವಕಾಶ ಮಾಡಲಾಗಿದೆ. ವಿವಾಹ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವುದಕ್ಕೆ ವಕ್ಫ್ ಕಾಯ್ದೆಯಡಿ ಅಧಿಕಾರ ಇಲ್ಲ. ವಕ್ಫ್ ಕಾಯ್ದೆ-1995ರ ಅನ್ವಯ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವುದು ವಕ್ಫ್ ಮಂಡಳಿ ಕಾರ್ಯವ್ಯಾಪ್ತಿ ಆಗಿದೆ. ಕರ್ನಾಟಕ ವಿವಾಹ ನೋಂದಣಿ ಕಾಯ್ದೆ-1976ರ ಪ್ರಕಾರ ವಿವಾಹ ನೋಂದಣಿ ಅಧಿಕಾರ ಇರುವುದು ಉಪ ನೋಂದಣಾಧಿಕಾರಿಗೆ ಮಾತ್ರ ಎಂದು ವಾದಿಸಿದ್ದಾರೆ.
ಮುಸ್ಲಿಮರಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಸಂಬಂಧ 2009ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ 2011ರಲ್ಲಿ ರದ್ದುಪಡಿಸಿದೆ. ಇದಾದ ಬಳಿಕ ಸರ್ಕಾರ ಪರಿಷ್ಕೃತ ಆದೇಶಗಳನ್ನು ಹೊರಡಿಸಿದೆ. ಈಗಾಗಲೇ ಉಪ ನೋಂದಣಾಧಿಕಾರಿಗಳ ಬಳಿ ವಿವಾಹ ನೋಂದಣಿಗೆ ಅವಕಾಶವಿದೆ. ಅಲ್ಲದೆ, ಸ್ಥಳೀಯ ಖಾಜಿಗಳ ಬಳಿಯೂ ವಿವಾಹ ದಾಖಲೆ ಸಲ್ಲಿಸಲಾಗುವುದು. ಆದಾಗ್ಯೂ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡುವ ಮೂಲಕ ಮೂರನೇ ವ್ಯವಸ್ಥೆಯೊಂದನ್ನು ಹುಟ್ಟು ಹಾಕಿರುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಅಲ್ಲದೆ, ಈ ಆದೇಶ ಸಂವಿಧಾನದ ಪರಿಚ್ಛೇದ 14ಕ್ಕೆ ತದ್ವಿರುದ್ಧವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
The High Court of Karnataka on Wednesday ordered issue of notice to the State government on a PIL petition, which had questioned the legality of the notification issued last year authorising the Karnataka State Board Auqaf and its Wakf officers in the districts to issue marriage certificates to married Muslim applicants.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm