ಬ್ರೇಕಿಂಗ್ ನ್ಯೂಸ್
18-10-24 04:00 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪಡೆದು ವಂಚಿಸಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಷಿ, ಸಹೋದರಿ ವಿಜಯಲಕ್ಷ್ಮೀ ಜೋಷಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆಂದು ಸುನೀತಾ ಚವ್ಹಾಣ್ ಎಂಬವರು ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನನ್ನ ಪತಿ ದೇವಾನಂದ್ ಫುಲ್‌ಸಿಂಗ್ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ನಂತರ 2023ರ ಚುನಾವಣೆಯಲ್ಲಿ ಸೋತಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಪತಿಗೆ ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಅವರು 25 ಲಕ್ಷ ರೂ. ಹಾಗೂ 5 ಕೋಟಿ ರೂ. ಚೆಕ್ ಮುಂಗಡವಾಗಿ ಪಡೆದಿದ್ದರು.
ಅಥಣಿಯಲ್ಲಿ ಎಂಜಿನಿಯರ್ ಆಗಿದ್ದ ಶೇಖರ್ ನಾಯಕ್ ಎಂಬವರ ಮೂಲಕ ಗೋಪಾಲ್ ಜೋಶಿ ಅವರ ಪರಿಚಯವಾಗಿತ್ತು. ಗೋಪಾಲ್ ಜೋಶಿ ಅವರು ಸೂಚಿಸಿದಂತೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿನ ಅವರ ಸಹೋದರಿ ವಿಜಯಲಕ್ಷ್ಮಿ ಅವರ ಮನೆಗೆ ಹಣ ಹಾಗೂ ಚೆಕ್ ತೆಗೆದುಕೊಂಡು ಹೋಗಿ ಕೊಟ್ಟಿದ್ದೆವು. ಆಗ ಸಹೋದರಿಯ ಮನೆಯಲ್ಲೇ ಇದ್ದ ಗೋಪಾಲ್ ಜೋಶಿ, ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತ ಸಹಾಯಕರಿಗೆ ಕರೆ ಮಾಡಿ ಮಾತನಾಡಿದಂತೆ ನಟಿಸಿದ್ದರು. ಅಲ್ಲದೆ, ತಮ್ಮ ಪತಿಗೆ ಬಿಜೆಪಿ ಟಿಕೆಟ್ ಖಚಿತವಾಗಿರುವುದಾಗಿ ಹೇಳಿ ಹಂತ ಹಂತವಾಗಿ 2 ಕೋಟಿ ರೂ. ಪಡೆದಿದ್ದರು.
ಪಕ್ಷದ ಟಿಕೆಟ್ ಸಿಗದ ಬಳಿಕ ಹಣ ವಾಪಸ್ ಕೇಳಿದಾಗ ಕಾರಣಗಳನ್ನು ಹೇಳಲು ಶುರು ಮಾಡಿದರು. 200 ಕೋಟಿ ರೂ.ಗಳ ಯೋಜನೆಯ ಬಿಲ್ ಬಾಕಿಯಿದ್ದು, ಹಣವನ್ನು ಒಟ್ಟಿಗೆ ಹಿಂದಿರುಗಿಸುವುದಾಗಿ ಹೇಳಿದರು. ಆಗಸ್ಟ್ 1ರಂದು ವಿಜಯಲಕ್ಷ್ಮಿ ಅವರ ನಿವಾಸಕ್ಕೆ ಭೇಟಿ ನೀಡಿದಾಗ ನನ್ನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದರು. ಅಲ್ಲದೆ, ನನಗೆ ಹಾಗೂ ನನ್ನ ಮಗನಿಗೆ ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ದೂರು ಹಿನ್ನೆಲೆಯಲ್ಲಿ ಪೊಲೀಸರು ಮೂವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, BNS ಸೆಕ್ಷನ್‌ಗಳ ಜೊತೆಗೆ SC/ST (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲೂ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Bengaluru police registered a case against Union Minister Pralhad Joshi's brother Gopal Joshi, sister Vijayalakshmi Joshi, and nephew Ajay Joshi, for allegedly cheating Sunitha Chauhan, wife of former JD(S) MLA Devanand Phool Singh Chauhan, of Rs 2.5 crore. The FIR registered on October 17 also includes charges under the SC/ST (Prevention of Atrocities) Act for hurling caste-based insults.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm