ಬ್ರೇಕಿಂಗ್ ನ್ಯೂಸ್
18-10-24 05:32 pm HK News Desk ಕರ್ನಾಟಕ
ಶಿವಮೊಗ್ಗ, ಅ.18: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಸೀಸನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಶೋ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸ್ಥಳೀಯ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಹಾಕಲಾಗಿದೆ.
ಬಿಗ್ ಬಾಸ್ ಶೋ ವಿರುದ್ಧ ಅನೇಕ ಆರೋಪ ಕೇಳಿಬಂದಿದ್ದು, ಕಳೆದ ವಾರ, 'ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ವಕೀಲೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚತ್ತುಕೊಂಡು ಈ ಬಾರಿಯ ನರಕ- ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗಿದೆ.
ಹೀಗಿರುವಾಗಲೇ ಬಿಗ್ ಬಾಸ್ 11ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2ರ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶೆ ಚಾಂದಿನಿ ಜಿ.ಯು. ಅವರು ವಕೀಲ ಕೆ.ಎಲ್ ಭೋಜರಾಜ್ ಅವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯ ವಿಧಾನದ ಕೋಡ್ ಕಾಯಿದೆ U/sec 26, order 7, rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದು, ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.
Case filed at Shivamogga court to stop big boss kannada show. Big boss kannada has both heaven and hell in which human rights commission had sent a notice to stop the hell game.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm