ಬ್ರೇಕಿಂಗ್ ನ್ಯೂಸ್
19-10-24 05:46 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್‌ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಣ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.
The Karnataka Government has officially decided not to conduct board examinations for students in classes 5, 8, 9, and 11 in state-affiliated schools, aligning with a directive from the Supreme Court.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm