BJP ticket fruad, Acp Chandan Kumar, Pralhad Joshi: ಬಿಜೆಪಿ ಟಿಕೆಟ್ ಹೆಸ್ರಲ್ಲಿ 2 ಕೋಟಿ ರೂ. ಮೋಸ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಗ್ ಬ್ರದರ್ ಬಂಧನ ; ಹುಬ್ಬಳ್ಳಿಗೆ ಕರೆತಂದು ಪರಿಶೀಲನೆ,  ಎಸಿಪಿ ಚಂದನ್ ವಿಚಾರಣೆ 

19-10-24 08:16 pm       HK News Desk   ಕರ್ನಾಟಕ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ ವಿರುದ್ಧ ದೂರು ದಾಖಲಿಸಿಕೊಂಡಿರುವ ಬೆಂಗಳೂರಿನ ಬಸವೇಶ್ವರನಗರ ಠಾಣಾ ಪೊಲೀಸರು, ಹುಬ್ಬಳ್ಳಿಯಲ್ಲಿರುವ ಮನೆಗೆ ಕರೆತಂದು ಪರಿಶೀಲನೆ ನಡೆಸಿದರು.

ಹುಬ್ಬಳ್ಳಿ , ಅ 19: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ ವಿರುದ್ಧ ದೂರು ದಾಖಲಿಸಿಕೊಂಡಿರುವ ಬೆಂಗಳೂರಿನ ಬಸವೇಶ್ವರನಗರ ಠಾಣಾ ಪೊಲೀಸರು, ಹುಬ್ಬಳ್ಳಿಯಲ್ಲಿರುವ ಮನೆಗೆ ಕರೆತಂದು ಪರಿಶೀಲನೆ ನಡೆಸಿದರು.

ಬೆಂಗಳೂರಿನಿಂದ ಶನಿವಾರ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಿದ ಎಸಿಪಿ ಚಂದನ್ ಕುಮಾರ್ ಅಂಡ್ ತಂಡ, ಕೇಶ್ವಾಪುರದ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಜೋಶಿ ಮನೆಯಲ್ಲಿ ಪರಿಶೀಲನೆ ನಡೆಸಿತು. ಬಳಿಕ ಗೋಪಾಲ್ ಜೋಶಿಯವರನ್ನು ಹೆಚ್ಚಿನ ವಿಚಾರಣೆಗೆ ಕೇಶ್ವಾಪುರ ಠಾಣೆಗೆ ಕರೆತರಲಾಯಿತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದರು.‌ ಖಚಿತ ಮಾಹಿತಿ ಮೇರೆಗೆ ಗೋಪಾಲ್ ಜೋಶಿ ಯನ್ನ ಕೊಲ್ಲಾಪುರ ಹಾಗೂ ಪುಣೆಯಲ್ಲಿ ಅವರ ಪುತ್ರ ಅಜಯ್ ಜೋಶಿ ಅವರನ್ನ ಬಂಧಿಸಿದ್ದಾರೆ. ಇಬ್ಬರನ್ನು ಬಂಧಿಸಿ ಹುಬ್ಬಳ್ಳಿ‌ಗೆ ಕರೆತಂದು ಪರಿಶೀಲನೆ ನಡೆಸಿದರು.

ಪ್ರಕರಣ ಸಂಬಂಧ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವರನ್ನ ಬಂಧಿಸಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್‌ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್ಗೆ ತೆರಳಿ ಬಂಧಿಸಿ ಹುಬ್ಬಳಿಗೆ ಕರೆತರಲಾಯಿತು ಎಂಬ ಮಾಹಿತಿ ಸಿಕ್ಕಿದೆ.

ಇದೇ ವೇಳೆ ಪ್ರಕರಣದ ದೂರುದಾರರಾದ ಸುನೀತಾ ಚವ್ಹಾಣ್ ಅವರು ಕೂಡ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಗೆ ಆಗಮಿಸಿದ್ದು, ಅವರಿಂದಲೂ ಪೊಲೀಸರು ಮಾಹಿತಿ‌ ಕಲೆ ಹಾಕುತ್ತಿದ್ದಾರೆ.

ದೇವಾನಂದ್‌ ಚವ್ಹಾಣ್‌ ಅವರು ಗೋಪಾಲ ಜೋಶಿ ಅವರನ್ನು ಹುಬ್ಬಳ್ಳಿಯ ನಿವಾಸದಲ್ಲಿ ಭೇಟಿ ಮಾಡಿದ್ದರು. ಸೋಮಶೇಖರ್ ನಾಯಕ್ ಭೇಟಿ ಮಾಡಿಸಿದ್ದರು. ಕೇಂದ್ರದಲ್ಲಿ ನನ್ನ ಸಹೋದರ ಪ್ರಲ್ಹಾದ ಜೋಶಿ ಅವರ ವರ್ಚಸ್ಸು ಚೆನ್ನಾಗಿದ್ದು, ವಿಜಯಪುರ ಕ್ಷೇತ್ರದಿಂದ ಬಿಜೆಪಿ ಟೆಕೆಟ್‌ ಕೊಡಿಸುವುದಾಗಿ ಗೋಪಾಲ ಜೋಶಿ ಆಮಿಷವೊಡ್ಡಿದ್ದರು. ಇದಕ್ಕಾಗಿ 5 ಕೋಟಿ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದ್ದರು. ಅಷ್ಟು ಹಣವಿಲ್ಲ ಎಂದಾಗ ಸದ್ಯಕ್ಕೆ 25 ಲಕ್ಷ ಕೊಡುವಂತೆ ತಿಳಿಸಿದ್ದರು. ಆ ಹಣವನ್ನು ಗೋಪಾಲ ಜೋಶಿ ಅವರು ಸೂಚಿಸಿದ ವಿಜಯಕುಮಾರಿ ಅವರ ಮನೆಗೆ ತಲುಪಿಸಲಾಗಿತ್ತು. ಅಲ್ಲದೇ ₹5 ಕೋಟಿ ಮೌಲ್ಯ ನಮೂದಿಸಿದ್ದ ಚೆಕ್‌ ಸಹ ಪಡೆದುಕೊಂಡಿದ್ದರು’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಟಿಕೆಟ್‌ ಸಂಬಂಧ ಅಮಿತ್‌ ಶಾ ಅವರ ಆಪ್ತ ಸಹಾಯಕರ ಜತೆಗೆ ಮಾತನಾಡಿರುವುದಾಗಿ ಗೋಪಾಲ ಜೋಶಿ ಹೇಳಿದ್ದರು. ಆದರೆ, ಟಿಕೆಟ್‌ ಕೊಡಿಸದೇ ವಂಚಿಸಿದ್ದಾರೆ. ಅದಾದ ಮೇಲೆ ಬಸವೇಶ್ವರನಗರದ ವಿಜಯಕುಮಾರಿ ಅವರ ಮನೆಗೆ ಕರೆಸಿಕೊಂಡು ಚೆಕ್‌ ವಾಪಸ್ ನೀಡಿದ್ದರು. 25 ಲಕ್ಷವನ್ನೂ ವಾಪಸ್ ನೀಡುವಂತೆ ಕೇಳಿದಾಗ, 200 ಕೋಟಿ ಮೊತ್ತದ ಯೋಜನೆಗಳ ಬಿಲ್‌ ತೋರಿಸಿ 1.75 ಕೋಟಿ ನೀಡಿದರೆ 20 ದಿನಗಳಲ್ಲಿ ಎಲ್ಲ ಹಣವನ್ನೂ ವಾಪಸ್ ನೀಡುವುದಾಗಿ ಹೇಳಿದ್ದರು. ಅವರ ಮಾತು ನಂಬಿ ಹಂತ ಹಂತವಾಗಿ 1.75 ಕೋಟಿ ನೀಡಿದ್ದೆ’ ಎಂದು ದೇವಾನಂದ್‌ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್‌ ನೀಡಿರುವ ದೂರು ಆಧರಿಸಿ ಎಫ್‌ಐಆರ್‌ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

Basaveshwara Nagar police on Saturday detained Union Minister Pralhad Joshi’s brother Gopal Joshi and nephew Ajay Joshi from Maharashtra for allegedly cheating a former MLA by offering a ticket in the 2024 Lok Sabha elections. Senior police officers confirmed to DH that Gopal and his son Ajay were detained in Kohlapur and Pune, respectively. “After procedures are completed, they will be brought back to Bengaluru somewhere late in the evening.