ಬ್ರೇಕಿಂಗ್ ನ್ಯೂಸ್
19-10-24 09:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿಯಿಂದ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿ ಎಸ್ಸಿ-ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಸ್ಪರ್ಧಿಸಲಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಬಸವರಾಜ ಬೊಮ್ಮಯಿ ಅವರು ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಸಂಡೂರು ಕ್ಷೇತ್ರದಲ್ಲಿ ಗೆದ್ದಿದ್ದ ಕಾಂಗ್ರೆಸ್ ಶಾಸಕ ತುಕಾರಾಮ್ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದ ಗೆದ್ದು ಸಂಸದರಾಗಿದ್ದರು. ಇವರಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪ ಚುನಾವಣೆ ನ.13ರ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿತ್ತು.
ಚನ್ನಪಟ್ಟಣ ಕ್ಷೇತ್ರದಿಂದ ಗೆದ್ದಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಈಗ ಕೇಂದ್ರ ಸಚಿವರಾಗಿದ್ದಾರೆ. ಇದೀಗ ಅವರಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಯಾರು ಎಂಬುದು ಇನ್ನೂ ನಿರ್ಣಯವಾಗಿಲ್ಲ. ಎರಡು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಸಾಧ್ಯತೆಯಿದೆ. ಆದರೆ ಜೆಡುಎಸ್ಸಿಗೆ ಸರಿಯಾದ ಅಭ್ಯರ್ಥಿ ಸಿಗದೇ ಹೋದರೆ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರೇ ಜೆಡಿಎಸ್ ಪಕ್ಷದ ಚಿಹ್ನೆಯಲ್ಲಿ ನಿಲ್ಲುವ ಸಾಧ್ಯತೆ ಹೆಚ್ಚಿದೆ.
ನವೆಂಬರ್ 13ರಂದು ಉಪ ಚುನಾವಣೆಗೆ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮೂರು ಕ್ಷೇತ್ರವನ್ನು ಮೂರೂ ಪಕ್ಷಗಳೂ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದ್ದರೆ ಸಂಡೂರು ಕ್ಷೇತ್ರಕ್ಕೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.
Out of the three Vidhan Sabha constituencies bound for by-elections, BJP had announced the names of candidates for Shiggaon and Sandur on Saturday. However, the candidate for Channapatna is yet to be decided. Bharat Basavaraj Bommai, son of the former CM Bommai, is the candidate for Shiggaon constituency. As Basavaraj Bommai, the previous legislator from the constituency, was elected an MP, the seat had become vacant.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm