ಬ್ರೇಕಿಂಗ್ ನ್ಯೂಸ್
21-10-24 11:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಚಿವ ಸಂತೋಷ್ ಲಾಡ್, ನಮ್ಮ ಸೈನಿಕ, ನಮ್ಮ ಹೀರೋ.. ಯೋಗೀಶ್ವರ್ ಕಾಂಗ್ರೆಸ್ ಬಂದರೆ ಅವರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಯೋಗೀಶ್ವರ್ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಚಿಹ್ನೆಯಲ್ಲಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ ಕುಮಾರಸ್ವಾಮಿ ಅವರು ತನ್ನ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಸಿದ್ಧರಿಲ್ಲ. ಇದರ ನಡುವೆಯೇ ಯೋಗೇಶ್ವರ್ ಚುನಾವಣೆ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬಸವರಾಜ್ ಹೊರಟ್ಟಿ ನಿವಾಸಕ್ಕೆ ತೆರಳಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತ ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್, ಸಿಪಿ ಯೋಗೇಶ್ವರ್ ನಮ್ಮ ಸೈನಿಕ, ನಮ್ಮ ಹೀರೊ. ಅವರು ಕಾಂಗ್ರೆಸ್‌ಗೆ ಬರ್ತಾರೆ ಅಂದ್ರೆ ಸ್ವಾಗತ ಮಾಡ್ತೇನೆ. ಸಿಪಿ ಯೋಗೇಶ್ವರ್‌ಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕೋ ಬೇಡವೋ ಅಂತ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ, ಸಿಪಿ ಯೋಗೇಶ್ವರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಅನ್ನೋ ಸುದ್ದಿ ಇದೆ. ಯೋಗೇಶ್ವರ್ ಬಂದ್ರೆ ಹೈಕಮಾಂಡ್, ನಮ್ಮ ಪಕ್ಷದ ಮುಖಂಡರು ಹಾಗೂ ನಾನು ವ್ಯಯಕ್ತಿಕವಾಗಿ ಸ್ವಾಗತ ಮಾಡ್ತೇನೆ ಎಂದಿದ್ದಾರೆ.
ಯೋಗೇಶ್ವರ್ ಅವರು ನಮ್ಮ ಪಕ್ಷಕ್ಕೆ ಬಂದ್ರೆ ಅನುಕೂಲ ಆಗುತ್ತೆ, ಅವರು ನಮ್ಮ ಸೈನಿಕ ಹೀರೋ, ಪಕ್ಷದ ನಾಯಕರು ಅವರನ್ನು ಸಂಪರ್ಕ ಮಾಡಿದ್ದಾರೋ ಇಲ್ವೋ ಗೊತ್ತಿಲ್ಲ. ಪಕ್ಷಕ್ಕೆ ಸೇರ್ಪಡೆಯಾದ್ರೆ ಚನ್ನಪಟ್ಟಣದಿಂದ ಕಾಂಗ್ರೆಸ್ ಟಿಕೆಟ್ ನೀಡ್ತಾರೆಯೇ ಅಂತ ನನಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರು ಹಾಗೂ ಅಲ್ಲಿನ ಮುಖಂಡರು ತೀರ್ಮಾನ ಮಾಡ್ತಾರೆ. ನಮ್ಮ ಪಕ್ಷದ ನಾಯಕರು ಸಿಪಿ ಯೋಗೇಶ್ವರ್ ಅವರೊಂದಿಗೆ ಚರ್ಚೆ ಮಾಡಿದ್ರು ಮಾಡಿರಬಹುದು, ಆದ್ರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.
Minister Santosh lad appluds C P Yogeshwar resignation, says he's out hero and solider. The resignation of BJP MLC C.P. Yogeshwar from his Council position and announcement of contesting possibly as an Independent in the Channapatna bypolls has come as a twist to the poll plot.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm