ಬ್ರೇಕಿಂಗ್ ನ್ಯೂಸ್
22-10-24 12:24 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ರಮ ಮಧ್ಯಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕರ್ನಾಟಕ ಲೋಕಾಯುಕ್ತದ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಆಗಸ್ಟ್ 3, 2015ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಆಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಕುಮಾರಸ್ವಾಮಿ ಮೇಲಿನ ಹಳೆ ಪ್ರಕರಣವನ್ನು ಕೆದಕಲು ಮುಂದಾಗಿದೆ. ಅರ್ಜಿಗೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸುವಂತೆ ಕುಮಾರಸ್ವಾಮಿ ಪರ ವಕೀಲರಿಗೆ ಕೋರ್ಟ್ ಸೂಚಿಸಿದ್ದು ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ. ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣ ಸಂಬಂಧಿತ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್‌ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಅಲ್ಲದೆ, ತನಿಖೆಯನ್ನು ಕುಂಠಿತಗೊಳಿಸುವ ಉದ್ದೇಶದಿಂದ ಆರೋಪಿ ಕುಮಾರಸ್ವಾಮಿ ಅವರು ರಾಜ್ಯಪಾಲರು ಮತ್ತು ಎಸ್‌ಐಟಿ ನಡುವಿನ ಸಂವಹನದ ವಿಚಾರವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಇದು ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಮತ್ತು ಪ್ರಾಸಿಕ್ಯೂಷನ್ ಸಾಕ್ಷಿ ಮತ್ತು ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತದೆ ಎಂದು ಎಸ್‌ಐಟಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಇತ್ತೀಚೆಗೆ ಕುಮಾರಸ್ವಾಮಿ ಜೊತೆಗೆ ಜಟಾಪಟಿ ನಡೆಸಿದ್ದ ಎಡಿಜಿಪಿ ಚಂದ್ರಶೇಖರ್ ಎಸ್ಐಟಿ ತಂಡದಲ್ಲಿ ಮುಖ್ಯಸ್ಥರಾಗಿದ್ದಾರೆ.
The SIT of the Karnataka Lokayukta to probe the illegal mining cases has moved the court requesting to cancel the bail granted to Union Minister for Heavy Industries and Steel HD Kumaraswamy in the case related to Sri Sai Venkateshwara Minerals on the grounds of interference with the investigation and threatening the witnesses.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm