ಬ್ರೇಕಿಂಗ್ ನ್ಯೂಸ್
22-10-24 05:26 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ಮುನಿಸಿಕೊಂಡಿರುವ ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಸಿ.ಪಿ. ಯೋಗೇಶ್ವರ್ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ್ದಾರೆ. ಇದೇ ವೇಳೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆದಿದೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ದವರೇ ಆಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ. ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಅವರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಪಿ. ಯೋಗೇಶ್ವರ್, ಅದು ಸಿದ್ದರಾಮಯ್ಯ ಅವರ ದೊಡ್ಡಗುಣ. ಮುಖ್ಯಮಂತ್ರಿಗಳು ಹಾಗೆ ಮಾತಾಡಿದ್ದಾರೆ ಅಂದ್ರೆ ಸಂತೋಷವಾಗುತ್ತಿದೆ. ನಾನು ಹಿಂದೆ ಕಾಂಗ್ರೆಸ್ ನಲ್ಲೇ ಇದ್ದವನು ಎಂದು ಹೇಳುವ ಮೂಲಕ
ಈ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿದ್ದು, ಅವರ ಸಮ್ಮುಖದಲ್ಲಿ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೇ ವೇಳೆ, ಸಿಪಿ ಯೋಗೀಶ್ವರ್ ಇಂದು ಸಂಜೆಯ ವರೆಗೆ ಕಾಯುತ್ತೇನೆ, ಬಿಜೆಪಿ ವರಿಷ್ಠರು ಟಿಕೆಟ್ ಕೊಟ್ಟರೆ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ. ಇಲ್ಲಾಂದ್ರೆ ಮುಂದಿನ ನಡೆಯನ್ನು ಕಾರ್ಯಕರ್ತರ ಆಶಯದಂತೆ ನಿರ್ಧರಿಸುತ್ತೇನೆ ಎಂದಿದ್ದಾರೆ.
ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆ ದಿನವಾಗಿದ್ದು ಇನ್ನೆರಡು ದಿನ ಇರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಬಗ್ಗೆ ತೀವ್ರ ಚಿಂತನೆಯಲ್ಲಿ ತೊಡಗಿದೆ.
Former Legislative Council member and BJP leader CP Yogeshwar is expected to join the Congress, with sources indicating that he will contest from Channapatna, a seat left vacant by the resignation of Union Minister HD Kumaraswamy.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm