ಬ್ರೇಕಿಂಗ್ ನ್ಯೂಸ್
22-10-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಬುಧವಾರ (ಅಕ್ಟೋಬರ್ 23) ನಗರದ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಮೂಲಕ ಒಂದೇ ವಾರದಲ್ಲಿ 2 ನೇ ಬಾರಿ ಶಾಲೆಗಳಿಗೆ ರಜೆ ಸಿಕ್ಕಿದೆ
ರಜೆ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಮೋರಿಗಳು ಉಕ್ಕಿ ಹರಿಯುತ್ತಿದ್ದು , ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ. ಸೋಮವಾರ ಬೆಳಿಗ್ಗೆ ತುರ್ತು ರಜೆ ಘೋಷಿಸಿದ್ದ ಜಿಲ್ಲಾಧಿಕಾರಿಗಳು ಮತ್ತೆ ಬುಧವಾರ ರಜೆ ಘೋಷಣೆ ಮಾಡಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜತೆಗೆ ಅಂಗನವಾಡಿಗೂ ರಜೆ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಪತ್ರದಲ್ಲಿ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ರಜೆ ಘೋಷಣೆ ಖಾಸಗಿ ಶಾಲೆಗಳು ವಿರೋಧ ;
ಮಳೆ ಹಿನ್ನೆಲೆ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಿರುವುದಕ್ಕೆ ಕೆಲ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಖಾಸಗಿ ಶಾಲೆಗಳ ಸಂಘವಾದ ಕಾಮ್ಸ್‌ನ ಪ್ರಮುಖರಾದ ಶಶಿಕುಮಾರ್ ಅವರು ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. " ಬೆಂಗಳೂರಿನ ಕೆಲ ಭಾಗಗಳಲ್ಲಿ ಮಳೆ ಹೆಚ್ಚಿಲ್ಲ, ಅನಾಹುತಗಳೂ ಆಗಿಲ್ಲ. ಇನ್ನು ಸೋಮವಾರ ಬೆಳಿಗ್ಗೆ ಮಳೆ ಬಂದು ರಜೆ ಘೋಷಣೆ ಬಳಿಕ ಬಿಸಿಲು ಬಂತು. ಹೀಗಾಗಿ, ರಜೆ ನೀಡುವ ಅಧಿಕಾರನ್ನು ಆಯಾ ಶಾಲೆಗಳಿಗೆ ನೀಡಬೇಕು " ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Owing to continuous rains, as a precautionary measure, a holiday has been declared for all anganwadi centres and private/aided primary and high schools of Bengaluru Urban District on Wednesday (October 23, 2024).
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm