ಬ್ರೇಕಿಂಗ್ ನ್ಯೂಸ್
23-10-24 09:41 pm Bangalore Correspondent ಕರ್ನಾಟಕ
ಬೆಂಗಳೂರು, ಅ 23: ಬೆಂಗಳೂರಲ್ಲಿ ಮಳೆ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿನ ಹಲವು ಮನೆಗಳಿಗೆ ಹಾನಿಯಾಗಿದ್ದು, ಜನ ಪರದಾಡುತ್ತಿದ್ದಾರೆ. ಇದೀಗ ಮಳೆ ಹಾನಿಯಿಂದ ಪರದಾಡುತ್ತಿರುವವರಿಗೆ ಪರಿಹಾರ ನೀಡುವ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಮನೆಗೆ ನೀರು ನುಗ್ಗಿ ತೊಂದರೆ ಎದುರಿಸುತ್ತಿರುವವರಿಗೆ ತಲಾ 10,000 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವುದಾಗಿ ಡಿಸಿಎಂ ಹೇಳಿದ್ದಾರೆ. ಅಲ್ಲದೇ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ. ರಾಜಕಾಲುವೆಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ನಡೆಯುತ್ತಿದೆ ಎಂದಿದ್ದಾರೆ
ಮಳೆಯಿಂದ ಸಮಸ್ಯೆ ಆಗಿರುವ ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ.ಆರ್ ಪುರಂನ ಹೊರಮಾವಿನ ಸಾಯಿ ಬಡಾವಣೆಗೆ ಡಿಕೆಶಿ ಬಿಬಿಎಂಪಿಯ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು ರಾಜಕಾಲುವೆ ಸ್ವಚ್ಛತಾ ಕೆಲಸದ ವಿಚಾರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೆಲಸ ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಅಡಿ ಕೆರೆಗಳ ಸ್ವಚ್ಛತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು ಎಂದು ಹೇಳಿದ್ದಾರೆ.
ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ ;
ಬೆಂಗಳೂರಿನಲ್ಲಿ ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬದವರಿಗೆ ಬಿಬಿಎಂಪಿಯಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ
ಬೆಂಗಳೂರಲ್ಲಿ ಖಾಸಗಿಯವರು ರಾಜಕಾಲುವೆ ಒತ್ತುವರಿ ತೆರವುಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದರಿಂದ ಕೆಲವು ಭಾಗದಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮಾಡಲು ಸಾಧ್ಯವಾಗುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ.
ಯಾವುದನ್ನೂ ಪರಿಗಣಿಸದೆ ಕೂಡಲೇ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಈ ಸಂಬಂಧ ಬಿಡಿಎ ಮತ್ತು ಬಿಬಿಎಂಪಿಗೂ ಸೂಚನೆ ನೀಡಿದ್ದೇನೆ. ಯಾರೇ ಖಾಸಗಿಯವರು ಅಡ್ಡಿ ಪಡಸಿದರೂ ನಾವು ನಮ್ಮ ಕೆಲಸ ಮಾಡುತ್ತೇವೆ. ಇಂತಹ ಸಂದರ್ಭದಲ್ಲಿ ನ್ಯಾಯಲಯದ ಪ್ರಕರಣ ಮುಖ್ಯವಲ್ಲ, ನಮಗೆ ಸಾರ್ವಜನಿಕರ ಹಿತ ಮುಖ್ಯ. ನೀರು ಸರಾಗವಾಗಿ ಹರಿಯುವ ಕಡೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕೆಲಸ ಮಾಡಬೇಕು ಎಂದು ಆದೇಶಿಸಿದ್ದೇನೆ ಎಂದಿದ್ದಾರೆ.
Rs ten thousand compensation for those houses flooded with rain water says D K Shivakumar. Rs 10,000 compensation, each, will be given to those whose houses have been affected because of rainwater and temporary accommodation and food arrangements will be made for those without housing," he added.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm