ಬ್ರೇಕಿಂಗ್ ನ್ಯೂಸ್
24-10-24 10:24 pm Bangalore Correspondent ಕರ್ನಾಟಕ
ಬೆಂಗಳೂರು, ಅ.24: ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಹೆಸರನ್ನು ಕೊನೆಗೂ ಘೋಷಣೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಇರುವಾಗ ಚನ್ನಪಟ್ಟಣದಿಂದ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.
ಗುರುವಾರ ಬೆಳಗ್ಗೆ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿದ್ದು ನಂತರ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ನಿಖಿಲ್ ಗೆ ಪ್ರಧಾನಿ ಮೋದಿ ಆಶೀರ್ವಾದ ಇದೆ. ಪಕ್ಷಾಂತರಿಗಳಿಗೆ ಜನರು ಪಾಠ ಕಲಿಸುತ್ತಾರೆ. ನೂರಕ್ಕೆ ನೂರು ನಿಖಿಲ್ ಈ ಚುನಾವಣೆ ಗೆಲ್ಲುತ್ತಾರೆ ಎಂದು ಹೇಳಿದರು.
In what promises to be a thriller in the bypolls, Channapatna Assembly constituency will witness a mega battle as Nikhil Kumaraswamy has been named the National Democratic Alliance (NDA) candidate to take on C.P. Yogeshwar, who filed his nomination on a Congress ticket on October 24
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm