ಬ್ರೇಕಿಂಗ್ ನ್ಯೂಸ್
03-11-24 12:46 pm Bangalore Correspondent ಕರ್ನಾಟಕ
ಬೆಂಗಳೂರು, ನ 3: ಸ್ಯಾಂಡಲ್‌ವುಡ್‌ನಲ್ಲಿ 'ಮಠ', 'ಎದ್ದೇಳು ಮಂಜುನಾಥ' ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಎಲ್ಲರ ಗಮನಸೆಳೆದಿದ್ದ ನಿರ್ದೇಶಕ ಗುರುಪ್ರಸಾದ್ ಅವರು ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಮಾದನಾಯಕನಹಳ್ಳಿಯಲ್ಲಿ ಇರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಮೃತದೇಹ ಪತ್ತೆಯಾಗಿದೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ ;
ಗುರುಪ್ರಸಾದ್ ಯಾವಾಗ ಆತ್ಮಹತ್ಯೆ ಮಾಡಿಕೊಂಡಿರಬಹುವುದು ಎಂಬ ಮಾಹಿತಿ ಸಿಕ್ಕಿಲ್ಲ. ಆದರೆ ಮೃತದೇಹವು ಕೊಳೆಯ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದರೆ, 10 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯ ಇದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.
ಎರಡನೇ ಮದುವೆ ;
ಗುರುಪ್ರಸಾದ್ ಅವರ ಸಾಂಸಾರಿಕ ಜೀವನ ಅಷ್ಟೊಂದು ಉತ್ತಮವಾಗಿರಲಿಲ್ಲ. ಮೊದಲನೇ ಪತ್ನಿಗೆ ವಿಚ್ಛೇದನ ನೀಡಿದ್ದು ಗುರುಪ್ರಸಾದ್, ಈಚೆಗಷ್ಟೇ ಎರಡನೇ ಮದುವೆ ಆಗಿದ್ದರು. ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ವರ್ಷದ ಆರಂಭದಲ್ಲಿ ಅವರ ನಿರ್ದೇಶನದ 'ರಂಗನಾಯಕ' ಚಿತ್ರ ತೆರೆಕಂಡಿತ್ತು. ಆದಾದ ಬಳಿಕ ಅವರು ಯಾವ ಸಿನಿಮಾವನ್ನು ಕೈಗೆತ್ತಿಕೊಂಡಿರಲಿಲ್ಲ.
ಇನ್ನೂ ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.
1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ.
2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್’,’ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ ‘ಮಠ’, ‘ಎದ್ದೇಳು ಮಂಜುನಾಥ’,’ಮೈಲಾರಿ’, ‘ಹುಡುಗರು’,’ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.
Sandalwood's famous director Guruprasad committed suicide. Math and Eddelu Manjunath movie fame director Guruprasad's body was found in a decomposed state. Guruprasad directed 5 movies in Kannada. Guruprasad also used to participate in reality shows. Meanwhile, Guruprasad committed suicide.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am