ಬ್ರೇಕಿಂಗ್ ನ್ಯೂಸ್
04-11-24 08:33 pm Bangalore Correspondent ಕರ್ನಾಟಕ
ಬೆಂಗಳೂರು, ನ.4: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಲಾಗಿದೆ. ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣ ಒಂದರಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸುವ ಸ್ಥಿತಿ ಬಂದಿದೆ.
ಪ್ರಕರಣ ಸಂಬಂಧಿಸಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಇತರ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯ ವಿಚಾರಣೆ ಬಾಕಿ ಇತ್ತು. ಇದೀಗ ಎ1 ಆರೋಪಿ ಸಿದ್ದರಾಮಯ್ಯಗೂ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಮುಡಾ ಪ್ರಕರಣದಲ್ಲಿ ಎ2 ಆರೋಪಿ, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಎ3 ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ.
ಇದೇ ವೇಳೆ, ಹಾವೇರಿಯಲ್ಲಿ ಲೋಕಾಯುಕ್ತ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೌದು ನನಗೆ ನೋಟಿಸ್ ಬಂದಿದೆ. ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
The Lokayukta Police on Monday summoned Karnataka Chief Minister Siddaramaiah for questioning in the Mysuru Urban Development Authority (MUDA) site allotment case, said officials.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 04:31 pm
Mangalore Correspondent
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm