ಬ್ರೇಕಿಂಗ್ ನ್ಯೂಸ್
04-11-24 08:37 pm Bangalore Correspondent ಕರ್ನಾಟಕ
ಬೆಂಗಳೂರು, ನ.4: ರಾಜ್ಯದಲ್ಲಿ ವಕ್ಫ್ ವಿವಾದ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಕ್ಫ್ ಕಾಯ್ದೆ ಕುರಿತು ರಚಿಸಲಾಗಿರುವ ಸಂಸತ್ ಜಂಟಿ ಸದನ ಸಮಿತಿ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದು, ತಕ್ಷಣವೇ ವಕ್ಫ್ ಬೋರ್ಡ್ ಹೆಸರಲ್ಲಿ ಆಸ್ತಿ ನೋಂದಣಿ ಮಾಡದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್)ಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿ ಕಂದಾಯ ದಾಖಲೆಗಳ ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್ ಮಂಡಳಿ ನೋಂದಾಯಿಸುತ್ತಿದ್ದು ಇದರಿಂದ ಸಾವಿರಾರು ಬಡವರು ಹಾಗೂ ರೈತರು ವಂಶ ಪರಂಪರೆಯಿಂದ ಬಂದ ಭೂಮಿಯ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ಜೆಪಿಸಿಯು ವಕ್ಫ್ ಕಾಯಿದೆಗೆ ತರಬಹುದಾದ ತಿದ್ದುಪಡಿಯ ನಿರೀಕ್ಷೆಯಲ್ಲಿ ವಕ್ಫ್ ಮಂಡಳಿಯು ರೈತರ ಜಮೀನುಗಳ ನೋಂದಾಯಿಸಲು “ತರಾತುರಿ ಪ್ರಯತ್ನಗಳು” ನಡೆಸುತ್ತಿದೆ ಎಂದು ಅಶೋಕ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.
ನೂರಾರು ರೈತರಿಗೆ ನೋಟಿಸ್
ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ನೋಟಿಸ್ ನೀಡಲಾಗಿದೆ ಎಂದು ಅಲ್ಲಿನ ರೈತರು ಹೇಳಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ. ಎಲ್ಲಾ ಜಿಲ್ಲೆಗಳಲ್ಲಿ ತಲಾ 10,000 ಎಕರೆ ಜಮೀನನ್ನು ವಕ್ಫ್ ನೋಂದಣಿ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗುತ್ತಿದೆ. ವಕ್ಫ್ ಮಂಡಳಿಯು ದೇವಸ್ಥಾನ, ಮಠ ಹಾಗೂ ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳ ಜಮೀನು ಕೂಡ ತನ್ನದು ಎಂದು ಹೇಳಿಕೊಂಡಿದೆ. ಹಿಂದೂ ಸ್ಮಶಾನ ಕೂಡ ತನ್ನದು ಎಂದು ವಕ್ಫ್ ಉಲ್ಲೇಖಿಸಿರುವುದು ಇನ್ನಷ್ಟು ಆಘಾತದ ಸಂಗತಿ ಎಂದು ಆರ್. ಅಶೋಕ್ ಹೇಳಿದ್ದಾರೆ.
ಇದಲ್ಲದೆ, ವಕ್ಫ್ ಮಂಡಳಿಯು ದೇವಾಲಯಗಳು, ಮಠಗಳು ಮತ್ತು ಇತರ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಭೂಮಿಯ ಮೇಲೂ ಹಕ್ಕು ಸಾಧಿಸುತ್ತಿದೆ. 13ನೇ ಶತಮಾನದಷ್ಟು ಹಳೆಯ ಇತಿಹಾಸ ಹೊಂದಿರುವ ವಿರಕ್ತ ಮಠಕ್ಕೆ ಸೇರಿದ ಸಿಂದಗಿಯ 1.28 ಎಕರೆ ಜಮೀನು, ವಿಜಯಪುರದ ಐತಿಹಾಸಿಕ ಸೋಮೇಶ್ವರ ದೇವಾಲಯ, ಕಲಬುರ್ಗಿಯ ಬೀರದೇವರ ಗುಡಿ ಸೇರಿದಂತೆ ಅನೇಕ ಜನಪ್ರಿಯ ಸ್ಥಳಗಳನ್ನು ಕೂಡ ವಕ್ಫ್ ತನ್ನದೆಂದು ಘೋಷಿಸಿದೆ. ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿ ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಬೇಕು. ವಕ್ಫ್ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕು ಎಂದು ಪತ್ರದ ಮೂಲಕ ಆರ್.ಅಶೋಕ್ ಮನವಿ ಮಾಡಿದ್ದಾರೆ.
Karnataka Leader of the Opposition (LoP) R. Ashoka wrote to Union Home Minister Amit Shah and Chairman of the Joint Parliamentary Committee on the Waqf (Amendment) Bill, 2024 Jagadambika Pal on Monday and demanded to stop all registrations of the Waqf Board.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
22-02-25 09:48 pm
HK News Desk
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
Kasargod News, Crime: ಉಕ್ಕಿನಡ್ಕ ; ಕೆರೆಗೆ ಬಿದ್...
22-02-25 01:31 pm
Donald Trump, Modi, India: ಭಾರತದಲ್ಲಿ ಮೋದಿಯನ್ನ...
21-02-25 01:23 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm