ಬ್ರೇಕಿಂಗ್ ನ್ಯೂಸ್
06-11-24 09:31 pm Bangalore Correspondent ಕರ್ನಾಟಕ
ಬೆಂಗಳೂರು, ನ 06: ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮೃತಪಟ್ಟ ಘಟನೆ ಯಶವಂತಪುರ ಬಳಿ ನಡೆದಿದೆ. ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಕಿರಣ್ ಕುಮಾರ್ (38) ಮೃತಪಟ್ಟ ಬಸ್ ಚಾಲಕ ಎಂದು ಬಿಎಂಟಿಸಿ ಅಧಿಕಾರಿಗಳು ದೃಢಪಡಿಸಿದ್ದಾರೆ.
ಕರ್ತವ್ಯ ಮುಗಿಸಿ ಕೊನೆಯ ಸುತ್ತುವಳಿಯಲ್ಲಿ, ನೆಲಮಂಗಲದಿಂದ ದಾಸನಪುರ ಘಟಕಕ್ಕೆ ಬರುವಾಗ ಚಾಲಕ ಕಿರಣ್ಗೆ ಹಠಾತ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಡ್ರೈವರ್ ಸೀಟ್ನಿಂದ ಪಕ್ಕಕ್ಕೆ ಜಾರಿ ಬಿದ್ದಿದ್ದಾನೆ. ಚಲನೆಯಲ್ಲಿದ್ದ ಬಸ್, ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ವಲ್ಪ ಡಿಕ್ಕಿ ಹೊಡೆದಿದೆ.
ಇದನ್ನು ಗಮನಿಸಿದ ನಿರ್ವಾಹಕ ಓಬಳೇಶ್ ಚಲಿಸುತ್ತಿದ್ದ ಬಸ್ ಕೂಡಲೇ ನಿಲ್ಲಿಸಿ ಚಾಲಕನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಕಿರಣ್ ಕುಮಾರ್ ಕೊನೆಯುಸಿರೆಳೆದಿದ್ದು, ಮರಣ ಹೊಂದಿರುವ ಬಗ್ಗೆ ವೈದ್ಯರು ಕೂಡ ಧೃಢಪಡಿಸಿದ್ದಾರೆ.
ಬಸ್ ರಸ್ತೆಯ ಒಂದು ಬದಿಗೆ ವಾಲುತ್ತಾ ಸಾಗಿತ್ತು. ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ಪಲ್ಪ ಡಿಕ್ಕಿಯೂ ಹೊಡೆದಿದೆ. ಇನ್ನೇನು ದೊಡ್ಡ ಪ್ರಮಾಣದ ಅನಾಹುತ ಸಂಭವಿಸಬೇಕು ಅನ್ನುವಷ್ಟರಲ್ಲೇ ನಿರ್ವಾಹಕ ಓಬಳೇಶ್ ಚಾಲಕನ ಸೀಟಿನಲ್ಲಿ ಕುಳಿತು ಬಸ್ ಅನ್ನು ತಕ್ಷಣ ನಿಲ್ಲಿಸಿದ್ದಾರೆ. ಮಾರ್ಗ ಸಂಖ್ಯೆ 256M/1, ವಾಹನ ಸಂಖ್ಯೆ F- 4007 ಆಗಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಡ್ರೈವರ್ ಕಿರಣ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಬಸ್ ಕಂಡಕ್ಟರ್ ಓಬ್ಳೇಶ್ ಸಂಚರಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.@RLR_BTM @BMTC_BENGALURU#BMTCBusIncident #Bengaluru #BusConductor #BusDriver… pic.twitter.com/RGFQNaUA50
— NewsFirst Kannada (@NewsFirstKan) November 6, 2024
BMTC bus driver dies of heart attack while driving bus, video recorded. Timely presence of the bus conductor has saved many lives of the passengers. The video of this incident as gone viral on social media.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am