ಬ್ರೇಕಿಂಗ್ ನ್ಯೂಸ್
07-11-24 06:17 pm HK News Desk ಕರ್ನಾಟಕ
ಹುಬ್ಬಳ್ಳಿ, ನ.7: ವಕ್ಫ್ ವಿವಾದಕ್ಕೆ ಕೇಂದ್ರ ಸರ್ಕಾರದ ಜಂಟಿ ಸದನ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಎಂಟ್ರಿ ಕೊಟ್ಟಿದ್ದಾರೆ. ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಯ ಚರ್ಚೆಗೆ ನೇಮಿಸಲಾಗಿರುವ ಸಂಸತ್ತಿನ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ನೇತೃತ್ವದಲ್ಲಿ ಸಮಿತಿ ಸದಸ್ಯರು ಹುಬ್ಬಳ್ಳಿಗೆ ಆಗಮಿಸಿದ್ದು ವಕ್ಫ್ ಆಸ್ತಿಗೆ ಸಂಬಂಧಿಸಿದ 75ಕ್ಕೂ ಹೆಚ್ಚು ಅಹವಾಲುಗಳನ್ನು ಆಲಿಸಿದ್ದಾರೆ.
ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಒಂದು ಗಂಟೆಗೂ ಹೆಚ್ಚು ಕಾಲ ಅಹವಾಲು ಸಭೆ ನಡೆಸಿದ್ದು ರೈತರು, ಸಾಮಾನ್ಯ ಜನರು, ವಿವಿಧ ಸಂಘಟನೆಗಳು ಹಾಗೂ ಬಿಜೆಪಿ ಶಾಸಕರಿಂದಲೂ ಅಹವಾಲು ಸ್ವೀಕರಿಸಿದರು. ವಕ್ಫ್ ಆಸ್ತಿಗೆ ಸಂಬಂಧಿಸಿ ರಾಜ್ಯ ಬಿಜೆಪಿ ರಚಿಸಿದ್ದ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ತಮ್ಮ ವರದಿಯ ಪ್ರತಿಯನ್ನು ಸಮಿತಿಗೆ ನೀಡಿದರು. ವಿಜಯಪುರ ಜಿಲ್ಲೆಯ ವಿವಿಧೆಡೆ ಸಂಚರಿಸಿ, ವರದಿ ಸಿದ್ಧಪಡಿಸಿದ್ದೇವೆ. 5ನೇ ಶತಮಾನ ಹಾಗೂ 12ನೇ ಶತಮಾನದಲ್ಲಿ ನಿರ್ಮಾಣವಾಗಿರುವ ದೇವಸ್ಥಾನದ ಜಾಗವನ್ನು ವಕ್ಫ್ ಆಸ್ತಿ ಎಂದು ನಮೂದಿಸಿರುವುದು ಕಂಡುಬಂದಿದೆ. ಹಿಂದೂ ದೇವಸ್ಥಾನಗಳ, ಮಠಗಳ ಆಸ್ತಿ ಹಾಗೂ ರೈತರ 1,000ಕ್ಕೂ ಹೆಚ್ಚು ಎಕರೆ ಜಾಗದ ಆರ್.ಟಿ.ಸಿ ಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದನ್ನು ದಾಖಲೆ ಸಮೇತ ವರದಿ ನೀಡಿದ್ದೇವೆ’ ಎಂದು ಗೋವಿಂದ ಕಾರಜೋಳ ತಿಳಿಸಿದರು.
ಬಿಜೆಪಿ ಸತ್ಯಶೋಧನಾ ಸಮಿತಿ ಸದಸ್ಯ, ವಕೀಲ ಎಂ.ಬಿ. ಜಿರಲಿ ಮಾತನಾಡಿ, ‘ಮಾಲೀಕರಿಗೆ ಯಾವುದೇ ನೋಟಿಸ್ ನೀಡದೇ ಜಾಗವನ್ನು ವಕ್ಫ್ ಆಸ್ತಿ ಎಂದು ಆರ್.ಟಿ.ಸಿ ಯಲ್ಲಿ ನಮೂದಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರೈತರ ಹೇಳಿಕೆಗಳು ಹಾಗೂ ದಾಖಲೆಗಳನ್ನು ನೀಡಿದ್ದೇವೆ’ ಎಂದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್, ಹಾವೇರಿ ಜಿಲ್ಲೆಯ ವಕೀಲರು, ಕುಂದಗೋಳ ಶಾಸಕ ಎಂ.ಆರ್. ಪಾಟೀಲ, ಭಾರತೀಯ ಕಿಸಾನ್ ಸಂಘ, ರತ್ನ ಭಾರತ ರೈತ ಸಮಾಜ, ನರಗುಂದ ತಾಲೂಕಿನ ರೈತರು, ಧಾರವಾಡ ಜಿಲ್ಲೆಯ ಉಪ್ಪಿನ ಬೆಟಗೇರಿ ರೈತರು, ಹಾವೇರಿ ಜಿಲ್ಲೆಯ ಹಾನಗಲ್ ರೈತರು, ಹಿಂದೂ ಜಾಗರಣ ವೇದಿಕೆ, ಗದಗ ಜಿಲ್ಲೆಯ ರೈತರು, ಗರಗ, ಅಣ್ಣಿಗೇರಿ ಭಾಗದ ಸಾರ್ವಜನಿಕರು ಸದನ ಸಮಿತಿಗೆ ಅಹವಾಲು ಸಲ್ಲಿಸಿದರು.
ಅಹವಾಲುಗಳನ್ನು ಸ್ವೀಕರಿಸಿದ ಜಗದಾಂಬಿಕಾ ಪಾಲ್ ಮಾತನಾಡಿ, ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದಿದೆ. ಕರ್ನಾಟಕದ ಜನರ ಸಮಸ್ಯೆ ಆಲಿಸಲು ಬಂದಿದ್ದೇನೆ. ಇದರ ವಿಸ್ತೃತ ವರದಿ ಸಿದ್ಧಪಡಿಸಲಾಗುವುದು. ರೈತರು, ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸುಮಾರು 50 ರಿಂದ 60 ವರ್ಷಗಳಿಂದ ಉಳುಮೆ ಮಾಡಿದ ಜಮೀನು, ದೇವಸ್ಥಾನಗಳ ಆಸ್ತಿ ಕಬಳಿಸಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ ಎಂದು ಪಾಲ್ ತಿಳಿಸಿದರು.
Members of various delegations mainly led by BJP legislators and leaders submitted their representations to the Chairman of the Joint Parliamentary Committee (JPC) looking into the Waqf (Amendment) Bill, 2024 Jagdambika Pal in Hubballi on November 7 complaining about mutation of individual and public properties being changed as waqf property in various districts of north Karnataka.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am