ಬ್ರೇಕಿಂಗ್ ನ್ಯೂಸ್
11-11-24 08:21 pm Bangalore Correspondent ಕರ್ನಾಟಕ
ಬೆಂಗಳೂರು, ನ.11: ಕೋವಿಡ್ ಕಾಲದಲ್ಲಾದ ಭ್ರಷ್ಟಾಚಾರಗಳ ಕುರಿತು ನಿವೃತ್ತ ನ್ಯಾ. ಮೈಕಲ್ ಡಿಕುನ್ಹಾ ಅವರ ಆಯೋಗದ ವರದಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡಿರುವ ವಿಚಾರದಲ್ಲಿ ಜಸ್ಟಿಸ್ ಡಿಕುನ್ಹಾ ಅವರನ್ನ ಕಾಂಗ್ರೆಸ್ ಏಜೆಂಟ್ ಎಂದು ಕರೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಖಂಡನೆ ವ್ಯಕ್ತವಾಗಿದ್ದು ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿವೃತ್ತ ನ್ಯಾಯಮೂರ್ತಿಯಾಗಿ ಜಸ್ಟಿಸ್ ಕುನ್ಹಾ ಅವರು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದವರು. ಗೌರವಾನ್ವಿತ ವ್ಯಕ್ತಿ ಬಗ್ಗೆ ಕೇಂದ್ರ ಸಚಿವರಾಗಿ ಪ್ರಲ್ಹಾದ್ ಜೋಶಿ ವೈಯಕ್ತಿಕ ನಿಂದನೆ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಪ್ರಲ್ಹಾದ್ ಜೋಶಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.
ಕೇಂದ್ರ ಸಚಿವರು ಎಂದಾಕ್ಷಣ ಏನು ಬೇಕಾದರು ಮಾತನಾಡಬಹುದು ಎಂಬ ಅಹಂಕಾರ ಪ್ರವೃತ್ತಿಯಲ್ಲಿ ಪ್ರಲ್ಹಾದ್ ಜೋಶಿಯವರಿದ್ದಾರೆ. ಇತ್ತೀಚೆಗೆ ಜೋಶಿ ಅವರ ಹೇಳಿಕೆಗಳು ಅಹಂಕಾರದಿಂದ ಕೂಡಿವೆ. ಜಸ್ಟೀಸ್ ಆಗಿದ್ದವರನ್ನ ಕಾಂಗ್ರೆಸ್ ಏಜೆಂಟ್ ಎಂದರೆ ಏನರ್ಥ.. ಜೋಶಿಯವರು ರಾಜಕಾರಣಿಗಳಾದ ನಮ್ಮ ಮೇಲೆ ಮಾತನಾಡಲಿ. ಅಥವಾ ಕಾನೂನು ಹೋರಾಟ ನಡೆಸಲಿ. ಆದರೆ ಗೌರವಾನ್ವಿತ ನ್ಯಾಯಮೂರ್ತಿಗಳ ವೈಯಕ್ತಿಕ ನಿಂದನೆ ಸರಿಯಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕುನ್ಹಾ ಅವರ ಆಯೋಗ ಅಂತಿಮ ವರದಿ ಸಲ್ಲಿಸುವ ಮುನ್ನ ಅವರ ಮೇಲೆ ಒತ್ತಡ ತರುವ ಪ್ರಯತ್ನವನ್ನ ಪ್ರಲ್ಜಾದ್ ಜೋಶಿ ನಡೆಸುತ್ತಿದ್ದಾರೆ. ಕುನ್ಹಾ ಅವರನ್ನ ಕಾಂಗ್ರೆಸ್ ಏಜೆಂಟ್ ಎಂದಿರುವುದು ಒತ್ತಡ ತಂತ್ರದ ಒಂದು ಭಾಗ. ವರದಿಯನ್ನ ವಿಮರ್ಶಿಸಲಿ. ಆದರೆ ಕುನ್ಹಾ ಅವರ ವೈಯಕ್ತಿಕ ನಿಂದನೆ ಸರಿಯಲ್ಲ. ಪ್ರಲ್ಜಾದ್ ಜೋಶಿ ಒಬ್ಬ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದವರು, ನಮ್ಮ ತನಿಖಾ ಆಯೋಗಗಳು, ವ್ಯವಸ್ಥೆಗಳ ವಿರುದ್ಧ ಮಾತನಾಡುತ್ತಿರುವುದು ದುರಂತ. ಈ ರೀತಿ ನಿಂದನೆಗಳನ್ನ ಮಾಡಿದರೆ ಮುಂದೆ ಯಾರು ಕೂಡ ತನಿಖೆ ನಡೆಸುವ ಜವಾಬ್ದಾರಿ ತೆಗೆದುಕೊಳ್ಳಲು ಮುಂದೆ ಬರದಿರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಮಿಷನ್ inquiry act 1952 ಪ್ರಕಾರ ಪ್ರಲ್ಹಾದ್ ಜೋಶಿ ಅವರ ಹೇಳಿಕೆ ಕಾನೂನು ಬಾಹಿರವಾಗಿದೆ. 6 ತಿಂಗಳ ವರೆಗೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಈ ವಿಚಾರವನ್ನ ರಾಷ್ಟ್ರಪತಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜ್ಯಪಾಲರು ನಮ್ಮ ಅಹಾವಾಲುಗಳನ್ನ ತಾಳ್ಮೆಯಿಂದ ಆಲಿಸಿದ್ದು, ಈ ರೀತಿಯ ವೈಯಕ್ತಿಕ ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Union Minister Pralhad Joshi accused Justice Michael D’Cunha of acting as an agent while investigating the procurement of PPE kits by the former BJP government during the 2020 Covid pandemic. Joshi questioned the timing of the interim report, which recommended prosecuting former Chief Minister BS Yediyurappa and Health Minister B Sriramulu. He suggested the report was released to distract voters during elections.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am