ಬ್ರೇಕಿಂಗ್ ನ್ಯೂಸ್
13-11-24 06:45 pm HK News Desk ಕರ್ನಾಟಕ
Photo credits : Bar Bench
ಹುಬ್ಬಳ್ಳಿ, ನ.13: ಮಹತ್ವದ ಬೆಳವಣಿಗೆಯಲ್ಲಿ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠದಲ್ಲಿ ಜಾಮೀನು ಮಂಜೂರಾಗಿದೆ. ಆಮೂಲಕ ಜೈಲು ಸೇರಿದ್ದ 97 ಮಂದಿಯ ಕುಟುಂಬಗಳಲ್ಲಿ ಆಶಾಕಿರಣ ಮೂಡಿದೆ.
10 ವರ್ಷಗಳ ಹಿಂದೆ ನಡೆದ ದಲಿತರ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಕೊಪ್ಪಳ ಜಿಲ್ಲಾ ನ್ಯಾಯಾಲಯ 98 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ಮಂದಿಗೆ ಒಂದೇ ದಿನ ತೀರ್ಪು ಪ್ರಕಟಿಸಿದ್ದರಿಂದ ಐತಿಹಾಸಿಕ ತೀರ್ಪು ಎನ್ನಲಾಗಿತ್ತು. ಇಡೀ ಗ್ರಾಮದ ಬಹುತೇಕ ಮನೆಗಳ ಸದಸ್ಯರು ಜೈಲು ಪಾಲಾಗಿದ್ದರು. ಇದರಿಂದ ಹಳೆ ಪ್ರಕರಣ ನೆನೆದು ಕಣ್ಣೀರು ಹಾಕಿದ್ದರು. ಆನಂತರ, ನಾವೆಲ್ಲ ಜೊತೆಯಾಗೇ ವಾಸವಿದ್ದೆವು ಎಂದಿದ್ದರು. ಜಿಲ್ಲಾ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 100 ಅಪರಾಧಿಗಳ ಪೈಕಿ 99 ಜನರಿಗೆ ಸದ್ಯಕ್ಕೆ ಮಧ್ಯಂತರ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ 97 ಮಂದಿ ಜೀವಾವಧಿ ಶಿಕ್ಷೆಯಾದವರು, ಸಾಮಾನ್ಯ ಶಿಕ್ಷೆಯಾಗಿದ್ದ ಇಬ್ಬರು ಇದ್ದಾರೆ. ಇನ್ನು ಪ್ರಕರಣದಲ್ಲಿ ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತುಪಡಿಸಿ ಉಳಿದೆಲ್ಲರಿಗೂ ಜಾಮೀನು ಸಿಕ್ಕಿದೆ. ಶಿಕ್ಷೆಯ ವಿಚಾರದಲ್ಲಿ ವಿಚಾರಣೆ ಮುಂದುವರಿಯಲಿದೆ.
ಕೊಪ್ಪಳ ಗಂಗಾವತಿ ಮರಕುಂಬಿ ಗ್ರಾಮದಲ್ಲಿ 2014 ರಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್‌ನಲ್ಲಿ ದಲಿತರಿಗೆ ಪ್ರವೇಶ ನೀಡದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಅದೇ ದಿನ ಮರಕುಂಬಿ ಗ್ರಾಮದ ಕೆಲ ಸರ್ವಣಿಯರು ಸಿನಿಮಾ ನೋಡಲು ಹೋದಾಗ ದಲಿತ ಯುವಕರು ಗಲಾಟೆ ನಡೆಸಿದ್ದರು. ಇದರ ಸಿಟ್ಟಿನಿಂದ ಅದೇ ದಿನ ರಾತ್ರಿ ದಲಿತರ ಕೇರಿಗೆ ನುಗ್ಗಿದ್ದ ಸರ್ವಣೀಯರು, ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅದೃಷ್ಟಕ್ಕೆ ಯಾವುದೇ ಪ್ರಾಣ ಹಾನಿ ಆಗಿರಲಿಲ್ಲ. ಪ್ರಕರಣದಲ್ಲಿ 117 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಲವರು ತೀರಿಕೊಂಡಿದ್ದರೆ, ವಿಚಾರಣೆ ಬಳಿಕ ಕೊಪ್ಪಳ ಜಿಲ್ಲಾ ನ್ಯಾಯಾಲಯ 101 ಮಂದಿ ವಿರುದ್ಧ ಶಿಕ್ಷೆ ಘೋಷಣೆ ಮಾಡಿತ್ತು.
Marakumbi caste atrocity case, 97 persons get bail by court. The Principal District & Sessions Court in Koppal has convicted 101 persons in a decade-old case of atrocity against members of Scheduled Castes at Marakumbi village in Gangavati taluk of Koppal district in Karnataka.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm