ಬ್ರೇಕಿಂಗ್ ನ್ಯೂಸ್
14-11-24 02:09 pm HK News Desk ಕರ್ನಾಟಕ
ಮೈಸೂರು, ನ 14: ಈವರೆಗೆ ಬಿಜೆಪಿ, ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್ನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದರು. ಆದರೆ ನಮ್ಮ ಶಾಸಕರು ಆಮಿಷಕ್ಕೆ ಒಳಗಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಬಾರಿ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಹಣ ಆಫರ್ ಮಾಡಿತ್ತು. ಈ ಹಣ ಎಲ್ಲಿಂದ ಬರುತ್ತೆ? ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್ ಹಣ ಪ್ರಿಂಟ್ ಹಾಕಿದ್ದಾರಾ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ ಎಂದು ಸಿಎಂ ಪ್ರಶ್ನಿಸಿದರು.
ಸಿಬಿಐ, ಇ.ಡಿ., ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ. ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ?. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಜನರಿಗೆ ಕರೆ ನೀಡಿದರು.
ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂಪಾಯಿ ನೀಡಿದೆ. ಈಗ ನರಸೀಪುರದಲ್ಲಿ 470 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.
ಬಿಜೆಪಿಯವರು ಗ್ಯಾರಂಟಿಯ ಹಣ ತೆಗೆದುಕೊಳ್ತಿಲ್ವಾ? ಬಿಜೆಪಿಯವರು ಉಚಿತವಾಗಿ ಬಸ್ಸಿನಲ್ಲಿ ಓಡಾಡುತ್ತಿಲ್ವಾ? ಉಚಿತ ವಿದ್ಯುತ್ ಪಡೆಯುತ್ತಿಲ್ವಾ? ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ವಾ? ನಾವು ತೆಗೆದುಕೊಳ್ತಿಲ್ಲ ಅಂತ ಬಿಜೆಪಿಯವರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸವಾಲೆಸೆದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಜನರು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದು ಎಚ್ಚರಿಸಿದರು.
Karnataka Chief Minister Siddaramaiah on Wednesday alleged that the opposition BJP offered Rs 50 crore each to the 50 Congress MLAs to remove his government. He said none of the Congress MLAs agreed with it, due to which the BJP is now resorting to filing false cases against him.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am