ಬ್ರೇಕಿಂಗ್ ನ್ಯೂಸ್
16-11-24 04:25 pm HK News Desk ಕರ್ನಾಟಕ
ಶಿವಮೊಗ್ಗ, ನ.16: ಕಾಂಗ್ರೆಸ್ ವಿರುದ್ಧ 'ಇಸ್ಲಾಮೀಕರಣ' ಮತ್ತು ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಮತ್ತು ಮುಸ್ಲಿಮರನ್ನು ರಸ್ತೆಯಲ್ಲಿ ಹುಡುಕಿ ಕೊಲ್ಲುವ ಕಾಲ ಬರುತ್ತದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಾಗಿದೆ.
ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ವಾಗ್ದಾಳಿ ನಡೆಸಿದ್ದ ಕೆಎಸ್ ಈಶ್ವರಪ್ಪ ವಿರುದ್ಧ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ವಕ್ಫ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಹೇಳಿದ್ದರು.
ಕೃಷಿ ಭೂಮಿ, ದೇವಸ್ಥಾನ, ಮಠಗಳು, ಪುರಾತತ್ವ ಇಲಾಖೆಯ ಅಧೀನದಲ್ಲಿರುವ ಶಾಲಾ ಕಾಲೇಜುಗಳ ಆಸ್ತಿಗಳನ್ನೂ ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸಲಾಗಿದೆ. ಸರ್.ಎಂ ವಿಶ್ವೇಶ್ವರಯ್ಯನವರು ಹುಟ್ಟಿದ ಹಳ್ಳಿಯನ್ನೂ ಅವರು ಬಿಟ್ಟಿಲ್ಲ. ಮುಸ್ಲಿಂ ಮುಖಂಡರೊಬ್ಬರು ಅಂಬೇಡ್ಕರ್ ಅವರ ಹೆಸರನ್ನು ಬಳಸುತ್ತಿದ್ದಾರೆ. ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ಸಿದ್ಧತೆ ನಡೆಸಿದ್ದು, ಅಂಬೇಡ್ಕರ್ ಅವರನ್ನು ಅವಮಾನಿಸಿದರೂ ಕಾಂಗ್ರೆಸ್ ಸರಕಾರ ಇಸ್ಲಾಮೀಕರಣವನ್ನು ನಿರಂತರವಾಗಿ ಬೆಂಬಲಿಸುತ್ತಿದೆ ಎಂದು ಈಶ್ವರಪ್ಪ ದೂರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ಘೋಷಿಸಲು ಮುಂದಾಗಿದ್ದಾರೆ. ಇವರು ಹಿಂದೂಸ್ತಾನವನ್ನು ಪಾಕಿಸ್ತಾನವನ್ನಾಗಿ ಮಾಡಲು ಹವಣಿಸುತ್ತಿದ್ದಾರಾ? ಹೀಗೆಯೇ ಮುಂದುವರಿದರೆ ಸಂತರು, ಋಷಿಮುನಿಗಳ ನೇತೃತ್ವದಲ್ಲಿ ಗಲಭೆಗಳು ಭುಗಿಲೇಳುವ ಕಾಲ ಬರಲಿದೆ. ಕಾಂಗ್ರೆಸ್ ನಾಯಕರನ್ನು ಬೇಟೆಯಾಡಿ ಕೊಲ್ಲುವ ದಿನಗಳು ಬಂದರೆ ಆಶ್ಚರ್ಯವಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
In a recent event that has stirred controversy, a case was registered against KS Eshwarappa, a former minister, following his incendiary remarks concerning the 'Islamization' of India and disputes over WAKF property. During a press briefing in Shimoga, Eshwarappa criticized the Congress and the Muslim community, triggering a significant backlash. The Jayanagar police station in Shimoga took the initiative to file a case suo moto, highlighting the severity of Eshwarappa's statements, which were aimed at inciting communal unrest.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm