ಬ್ರೇಕಿಂಗ್ ನ್ಯೂಸ್
            
                        19-11-24 06:55 pm Bangalore Correspondent ಕರ್ನಾಟಕ
            ಬೆಂಗಳೂರು, ನ.19: ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾದ ಘಟನೆ ನಗರದ ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.
ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20) ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದು, ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಇಂದು ಸಂಜೆ 5.30ರ ಸುಮಾರಿಗೆ ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್ಗೆ ಅಗ್ನಿ ಅವಘಡ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್ಗೆ ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಭೀಕರ ಬೆಂಕಿಗೆ ಶೋರೂಮ್ ಹಾಗೂ ಎಲೆಕ್ಟ್ರಿಕ್ ಸ್ಕೂಟರ್‌ಗಳು ಸುಟ್ಟ ಭಸ್ಮವಾಗಿವೆ.
ನೋಡನೋಡ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದೆ. ಬೆಂಕಿಯ ಭೀಕರತೆ ಎಷ್ಟಿತ್ತು ಅಂದ್ರೆ, ಶೋರೂಮ್ನ ಒಳಗಡೆ ಇದ್ದ 20 ವರ್ಷದ ಸೇಲ್ಸ್ ಗರ್ಲ್ ಪ್ರಿಯಾ ಹೊರ ಬರಲು ಆಗದೇ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಇನ್ನು ಶೋರೂಮ್ನಲ್ಲಿದ್ದ 45ಕ್ಕೂ ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
#BreakingNews : A fire broke out at an electric vehicle (EV) store on Dr. Rajkumar Road in Rajajinagar's Navrang area. Two fire engines were dispatched to the scene to extinguish the blaze.#Fire #EVshowroom pic.twitter.com/GpmGt9e7aK
— Nithya Mandyam (@Nithya_Mandyam) November 19, 2024
            
            
            Bangalore Fire in two wheeler electric showroom, sales girl killed, 45 two wheeler gutted in fire. The deceased has been identified as Priya (20). Short circuit in the showroom has lead to such a fire accident.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm